News Karnataka Kannada
Saturday, April 13 2024
Cricket
ಮೈಸೂರು

ಕನಿಷ್ಟ ಬೆಂಬಲ ಬೆಲೆ ಮುಂದುವರಿಯಲಿದೆ: ಸದಾನಂದ ಗೌಡ

Photo Credit :

ಕನಿಷ್ಟ ಬೆಂಬಲ ಬೆಲೆ ಮುಂದುವರಿಯಲಿದೆ: ಸದಾನಂದ ಗೌಡ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸಬೇಕು ಎಂಬ ಉದ್ದೇಶದಿಂದಲೇ ಕೃಷಿ ತಿದ್ದುಪಡಿ ಮಸೂದೆ ಜಾರಿಗೆ ತಂದಿದೆ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿವಿ ಸದಾನಂದಗೌಡ ತಿಳಿಸಿದರು.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ವಿವಿಧ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ, ಕಿಸಾನ್ ಕಾರ್ಡ್, ಸೊಯ್ಲ ಹೆಲ್ತ್, ಕಾರ್ಡ್, ಕಡಿಮೆ ಬಡ್ಡಿ ದರದ ಸಾಲ, ಆನ್ ಲೈನ್ ಮೂಲಕ ಕೃಷಿ ಉತ್ಪನ್ನ ಮಾರಾಟಕ್ಕಾಗಿ ಇ-ನ್ಯಾಮ್ ಡಿಜಿಟಲ್ ಪ್ಲಾಟ್ ಫಾರ್ಮ್, ಪಿಎಂ ಕಿಸಾನ್ ಯೋಜನೆಯಡಿ ಪ್ರತಿ ರೈತರಿಗೆ ವರ್ಷಕ್ಕೆ 6 ಸಾವಿರದಂತೆ ನೇರ ನಗದು ವರ್ಗಾವಣೆ ಸಮಯಕ್ಕೆ ಸರಿಯಾಗಿ ಸಮರ್ಪಕ ಗೊಬ್ಬರ ಸರಬರಾಜು, ವೃದ್ಧಾಪ್ಯ ಪಿಂಚಣಿ, ಬೆಳೆ ವಿಮೆ, ನೀರಾವರಿ ಸೌಲಭ್ಯ ಹೆಚ್ಚಳ, ಕೋಲ್ಡ್ ಸ್ಟೋರೇಜ್ ಸರಪಣಿ ವಿಸ್ತರಣೆ ರಫ್ತಿಗೆ ಪ್ರೋತ್ಸಾಹ ಸೇರಿದಂತೆ ಹಲವು ಯೋಜನೆ ನೀಡಲಾಗಿದೆ. ಸ್ವಾವಲಂಬಿ ಭಾರತ ಯೋಜನೆಯಲ್ಲೂ ಕೃಷಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಒಂದು ಲಕ್ಷ ಕೋ.ರೂಪಾಯಿ ಒದಗಿಸಲಾಗಿದೆ ಎಂದರು.

ಕೃಷಿ ವಲಯದ ಅಮೂಲಾಗ್ರ ಸುಧಾರಣೆಗಾಗಿ ನಮ್ಮ ಸರ್ಕಾರ ಕೃಷಿ ಸಂಬಂಧಿತ ಮೂರು ಮಸೂದೆಗಳನ್ನು ರಚಿಸಲು ಮುಂದಾಯಿತು. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ಸುಗಮೀಕರಣ) ಮಸೂದೆ 2020, ರೈತರ(ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ 2020, ಅಗತ್ಯ ಸರಕುಗಳ(ತಿದ್ದುಪಡಿ)ಮಸೂದೆ 2020 ಕೃಷಿ ಮಸೂದೆಗಳು ದಶಕಗಳಿಂದ ವಿವಿಧ ಸಂಕೋಲೆಗಳಿಂದ ಬಳಲುತ್ತಿದ್ದ ರೈತರ ಸಮುದಾಯವನ್ನು ಬಂಧಮುಕ್ತಗೊಳಿಸಿವೆ ಎಂದರು.

ಕೇಂದ್ರವು ಅಂಗೀಕರಿಸಿದ ಹೊಸ ಕಾಯ್ದೆಗಳಿಂದ ಎಲ್ಲ ಬಂಧಗಳಿಂದ ಮುಕ್ತಗೊಳಿಸಿದೆ. ರೈತರು ಈಗ ತಮ್ಮ ಉತ್ಪನ್ನಗಳನ್ನು ದೇಶದ ಯಾವುದೇ ಮೂಲೆಯಲ್ಲಿ ಯಾರಿಗೆ ಬೇಕಾದರೂ ತಮಗಿಷ್ಟ ಬಂದ ದರದಲ್ಲಿ ಮಾರಬಹುದು. ವಿರೋಧ ಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿರುವುದು ಮಾತ್ರ ವಿಷಾದ. ಮಸೂದೆಗಳಲ್ಲಿ ಅವರಿಗೆ ಏನೂ ಋಣಾತ್ಮಕ ಅಂಶಗಳು ಸಿಗುತ್ತಿಲ್ಲ. ಹಾಗಾಗಿ ಮಸೂದೆಗಳ ಬಗ್ಗೆ ಸುಳ್ಳಿನ ಮಹಾಪೂರವನ್ನೇ ಹರಿಸಿ ಸರ್ಕಾರದ ವಿರುದ್ಧ ರೈತರನ್ನು ಎತ್ತಿಕಟ್ಟುವ ಪ್ರಯತ್ನ ನಡೆಸಿದ್ದು, ಹೇಗಾದರೂ ಸರ್ಕಾರದ ಹೆಸರು ಕೆಡಿಸಬೇಕು ಎಂದು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಹಿಂತೆಗೆದುಕೊಳ್ಳಲಾಗುತ್ತದೆ ಎಂಬ ಹಸೀ ಸುಳ್ಳನ್ನು ಮಸೂದೆ ವಿರೋಧಿಗಳು ರೈತ ಸಮುದಾಯದಲ್ಲಿ ಹರಡುತ್ತಿದ್ದಾರೆ. ಅಂತಹ ಯಾವ ಅಂಶವೂ ಮಸೂದೆಯಲ್ಲಿ ಇಲ್ಲ. ಭವಿಷ್ಯದಲ್ಲಿ ಅಂತಹ ಕ್ರಮ ಕೈಗೊಳ್ಳುವ ಯೋಚನೆ ಕೂಡ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು. ಕನಿಷ್ಠ ಬೆಂಬಲ ಬೆಲೆ ಮುಂದುವರಿಯುವುದಷ್ಟೇ ಅಲ್ಲ. ಆ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲಾಗುತ್ತದೆ. ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು