News Karnataka Kannada
Tuesday, April 23 2024
Cricket
ಮೈಸೂರು

ಕೆರೆ ಏರಿ ಒಡೆದು ಲಕ್ಷಾಂತರ ರೂಪಾಯಿಯ ಬೆಳೆ ನಾಶ

Photo Credit :

ಕೆರೆ ಏರಿ ಒಡೆದು ಲಕ್ಷಾಂತರ ರೂಪಾಯಿಯ ಬೆಳೆ ನಾಶ

ಚಾಮರಾಜನಗರ: ಸರಿಯಾದ ನಿರ್ವಹಣೆ ಇಲ್ಲದೆ ಕೆರೆಯೊಂದು ಇಂದು ಒಡೆದಿದ್ದು, ನಾಟಿ ಮಾಡಿದ ಗದ್ದೆಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆ ನಾಶವಾದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಈ ಬೃಹತ್ ಕೆರೆ ನೂರಾರು ಎಕರೆ ವಿಸ್ತೀರ್ಣವಿದ್ದು , ಇದಕ್ಕೆ ಕಬಿನಿಯಿಂದ ಬಂದ ನೀರು ತುಂಬಿತ್ತು. ಕೆರೆಯು ನೀರಿನಿಂದ ಭರ್ತಿ ಆಗಿದ್ದು ಏರಿ ಒಡೆಯುವ ಮುನ್ಸೂಚನೆ ರೈತರಿಗೆ ಮೊದಲೆ ತಿಳಿದು, ಅಧಿಕಾರಿಗಳ ಗಮನಕ್ಕೂ ತಂದಿದ್ದರು. ಆದರೆ, ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಇಂದು ಕೆರೆ ಏರಿ ಒಡೆಯಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆರೆ ಏರಿ ಒಡೆದ ಪರಿಣಾಮ ಸುಮಾರು 500 ಎಕರೆಗೂ ಹೆಚ್ಚು ಪ್ರದೇಶದಲ್ಲಿ ನಾಟಿ ಮಾಡಿದ್ದ ಭತ್ತದ ಬೆಳೆ ನಾಶವಾಗಿದೆ. ಕೆರೆಯನ್ನು ಹಲವರು ಒತ್ತುವರಿ ಮಾಡಿಕೊಂಡಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ರೈತರು ದೂರಿದ್ದಾರೆ. ಕಳೆದ ವಾರವಷ್ಟೇ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಕೆರೆ ಒತ್ತುವರಿ ತೆರವು ಮಾಡಿ, ಮಾದರಿ ಕೆರೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಹೀಗಾಗಿ ಇಂತಹ ಅಧಿಕಾರಿಗಳನ್ನು ಕೂಡಲೇ ವಜಾ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಕೆರೆ ಒಡೆದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ನರೇಂದ್ರ, ಕೆರೆ ಒಡೆಯಲು ಅಧಿಕಾರಿಗಳೇ ಕಾರಣ. ಕೆರೆ ಒಡೆಯುವ ಮುನ್ಸೂಚನೆಯನ್ನು ರೈತರು ನಿನ್ನೆಯೇ ನೀಡಿದ್ದಾರೆ. ಏರಿಗೆ ಮಣ್ಣು ಹಾಕುವಂತೆ ಹೇಳಿದರೂ ಕೆಲಸ ಮಾಡಲಿಲ್ಲ. ಇಷ್ಟೊಂದು ಬೆಳೆ ನಾಶವಾಗಿದೆ. ಇದಕ್ಕೆ ಜವಾಬ್ದಾರರು ಯಾರು ಪ್ರಶ್ನಿಸಿದರು. ಇದೇ ವೇಳೆ ಬೆಳೆ ನಾಶವಾಗಿರುವ ರೈತರಿಗೆ ಪರಿಹಾರ ಒದಗಿಸುವ ಕುರಿತು ಭರವಸೆ ನೀಡಿದರು. ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದು, ತಾಲೂಕು ಆಡಳಿತಕ್ಕೆ ಸೂಚನೆ ನೀಡಿ ಬೆಳೆ ನಷ್ಟದ ವಿವರ ಒದಗಿಸುವಂತೆ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು