News Karnataka Kannada
Friday, April 19 2024
Cricket
ಮೈಸೂರು

ಕೇರಳದ ವೈನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯ ಭರ್ತಿ

Photo Credit :

ಕೇರಳದ ವೈನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯ ಭರ್ತಿ

 

ಮೈಸೂರು- ಇತ್ತೀಚೆಗೆ ಕೇರಳದ ವೈನಾಡಿನಲ್ಲಿ  ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್. ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಜಲಾಶಯ ಭರ್ತಿಯಾಗಲು  ಒಂದು ಅಡಿ ಮಾತ್ರ ಬಾಕಿ ಇದೆ.

ಕಬಿನಿ ಜಲಾಶಯಕ್ಕೆ 16,112  ಕ್ಯೂಸೆಕ್ ನೀರು ಬರುತ್ತಿದ್ದು, ಜಲಾಶಯದಿಂದ ಒಟ್ಟು 15,625 ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ನಾಲೆಗಳಿಗೆ 625 ಕ್ಯೂಸೆಕ್, ನದಿಗೆ 15,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿ ಆಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 2283.02 ಅಡಿ ಇದೆ.

 

ಒಟ್ಟು 19.52 ಟಿ. ಎಂ. ಸಿ. ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಇಂದು 18.87 ಟಿ. ಎಂ.ಸಿ ನೀರು ಸಂಗ್ರಹವಾಗಿದೆ. ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆನೀರು ಹರಿದು ಬಂದಿದ್ದು ಕಪಿಲಾ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು