News Karnataka Kannada
Saturday, April 13 2024
Cricket
ಮೈಸೂರು

ಕೊರೋನಾ ಹತ್ತಿಕ್ಕುವುದು ಮೈಸೂರು ನೂತನ ಜಿಲ್ಲಾಧಿಕಾರಿಯ ಆದ್ಯತೆ

Photo Credit :

ಕೊರೋನಾ ಹತ್ತಿಕ್ಕುವುದು ಮೈಸೂರು ನೂತನ ಜಿಲ್ಲಾಧಿಕಾರಿಯ ಆದ್ಯತೆ

ಮೈಸೂರು: ಇಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿಣಿ ಅವರು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದು ಅಧಿಕಾರ ಸ್ವೀಕಾರ ಮಾಡಿದ್ದೇನೆ. ನಮ್ಮ ಮುಂದೆ ಎರಡು ವಿಚಾರ ಗಂಭೀರವಾಗಿದೆ. ಮೊದಲಿಗೆ ಬೆಂಗಳೂರು ನಂತರ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೈಸೂರಲ್ಲಿ ಕೊರೊನಾ ಟೆಸ್ಟಿಂಗ್ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಹೀಗಾಗಿ ಟೆಸ್ಟಿಂಗ್ ಹೆಚ್ಚಿಸುವ ಅಗತ್ಯವಿದೆ. ಇದಕ್ಕೆ ಜನರ ಸಹಕಾರ ಬೇಕು. ಕೊರೊನಾ ಲಕ್ಷಣ ಕಂಡುಬಂದಲ್ಲಿ ತಕ್ಷಣವೇ ಟೆಸ್ಟಿಂಗ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡರು.

ದಸರಾಗೆ ಸಿದ್ಧತೆ ಈಗಾಗಲೇ ಆರಂಭವಾಗಿದೆ. ನಾನು ಇದೇ ಮೊದಲ ಬಾರಿಗೆ ದಸರಾ ಮಾಡುತ್ತಿದ್ದೇನೆ. ಈ ಹಿಂದೆ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆದಾಗ ನಾನು ಹಾಸನ ಜಿಲ್ಲಾಧಿಕಾರಿಯಾಗಿದ್ದೆ. ಅಲ್ಲಿ ಸುಮಾರು 20-25 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. ಆದರೆ ಇದು ನಾಡಹಬ್ಬ, ಅದರಲ್ಲೂ ಕೋವಿಡ್ ಸಮಯದಲ್ಲಿ ತುಂಬಾ ಸೂಕ್ಷ್ಮವಾಗಿ ಕೆಲಸ ಮಾಡಬೇಕು. ಈ ಎರಡು ವಿಚಾರದ ಬಗ್ಗೆ ಹೆಚ್ಚು ಗಮನಹರಿಸುತ್ತೇನೆ. ತುರ್ತಾಗಿ ಅಧಿಕಾರಿಗಳ ಸಭೆ ನಡೆಸುತ್ತೇನೆ. ಮೈಸೂರು ನನಗೆ ಹೊಸದಲ್ಲ. ಮೈಸೂರಿನಲ್ಲೇ ಆಡಳಿತ ತರಬೇತಿ ಪಡೆದಿದ್ದೇನೆ. ಇದಕ್ಕೆ ಜನರ ಸಹಕಾರ ತುಂಬಾ ಅಗತ್ಯವಾಗಿದೆ ಎಂದು ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

ಒಂದು ತಿಂಗಳ ಹಿಂದಷ್ಟೆ ಬಿ ಶರತ್ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ ಕಳೆದ ಒಂದು ತಿಂಗಳಿನಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಯಾವುದೇ ಯೋಜನೆ ಹಾಕಿಕೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಸಾವಿನ ಸಂಖ್ಯೆ, ಪಾಸಿಟಿವ್ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದರೂ ತಾತ್ಕಾಲಿಕವಾಗಿ ಆಸ್ಪತ್ರೆ ಅಥವಾ ಕ್ವಾರಂಟೈನ್‌ ಕೇಂದ್ರ ತೆರೆಯಲು ಜಿಲ್ಲಾಧಿಕಾರಿ ಶರತ್ ಮುಂದಾಗಿರಲಿಲ್ಲ. ಕೊರೊನಾ ಏರಿಕೆ ನಡುವೆ ಅತಿ ಸರಳ ದಸರಾ ಆಚರಣೆ ಸರ್ಕಾರಕ್ಕೆ ದೊಡ್ಡ ಸವಾಲು ಕೂಡ ಆಗಿದೆ. ಆದ್ರೆ ಇದುವರೆಗೂ ಜಿಲ್ಲಾಧಿಕಾರಿ ದಸರಾ ಆಚರಣೆ ಕುರಿತು ತಾವು ಹಾಕಿಕೊಂಡಿರುವ ಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆಯಲ್ಲಿ ಶರತ್ ಅವರ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ.

ಇನ್ನೊಂದು ಮೂಲದ ಪ್ರಕಾರ ಇತ್ತೀಚೆಗೆ ತಿರುಪತಿಯಲ್ಲಿ ಕರ್ನಾಟಕ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಗನ್ ಮೋಹನ್ ರೆಡ್ಡಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶಕಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಪಾಲ್ಗೊಂಡಿದ್ದರು. ಈ ವೇಳೆ ಜಗನ್ ಅವರು ರೋಹಿಣಿ ಅವರನ್ನು ಮೈಸೂರಿನ ಡಿಸಿಯಾಗಿ ನೇಮಕ ಮಾಡುವ ಕುರಿತು ಬಿಎಸ್‌ವೈ ಜೊತೆ ಚರ್ಚೆ ನಡೆಸಿದ್ದರು ಎಂದು ತಿಳಿದು ಬಂದಿದೆ.

ಇದಕ್ಕೂ ಮುನ್ನ 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಜಗನ್ ಅವರು ರೋಹಿಣಿ ಸಿಂಧೂರಿ ಅವರನ್ನು ಆಂಧ್ರಪ್ರದೇಶಕ್ಕೆ ವರ್ಗಾಯಿಸುವಂತೆ ಕೋರಿದ್ದರು. ಜಗನ್ ಅವರ ಮಹಾತ್ವಾಕಾಂಕ್ಷೆಯ ಸ್ಪಂದನ ಕಾರ್ಯಕ್ರಮದ ಉಸ್ತುವಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದರು. ಜನಸಾಮಾನ್ಯರ ಸಮಸ್ಯೆಗಳ ಕುರಿತ ಅರ್ಜಿಯನ್ನು ಆನ್‌ಲೈನ್‌ ಮೂಲಕ ಪಡೆದು ಕಾಲಮಿತಿಯೊಳಗೆ ಪರಿಹರಿಸುವುದು ಸ್ಪಂದನ ಕಾರ್ಯಕ್ರಮದ ಉದ್ದೇಶವಾಗಿದೆ. ಉದ್ದೇಶಿತ ಯೋಜನೆಗಾಗಿ ಬಹಳಷ್ಟು ಬಾರಿ ಅಧಿಕಾರಿಗಳು, ಸಚಿವ ಸಂಪುಟದೊಂದಿಗೆ ಚರ್ಚೆ ನಡೆಸಿದ್ದ ಜಗನ್ ಅವರು ರೋಹಿಣಿ ಸಿಂಧೂರಿ ಅವರೇ ಈ ಯೋಜನೆಗೆ ಸಮರ್ಥ ಅಧಿಕಾರಿ ಎಂದು ಹೇಳಿದ್ದರು ಎಂದು ತಿಳಿದುಬಂದಿದೆ. ಅವಿಭಜಿತ ಆಂಧ್ರ ಮೂಲದ ರೋಹಿಣಿ ಸಿಂಧೂರಿ ಅವರು ಹೈದರಾಬಾದ್ ವಿವಿಯಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಮುಗಿಸಿದ್ದ ಅವರು 2009ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು