News Karnataka Kannada
Saturday, April 20 2024
Cricket
ಮೈಸೂರು

ಜಯಚಾಮರಾಜೇಂದ್ರ ಒಡೆಯರ್ ೧೦೧ ನೇ ಜನ್ಮ ದಿನಾಚರಣೆ : ನೇರಪ್ರಸಾರದಲ್ಲಿ ಪಾಲ್ಗೊಂಡ ಉಪರಾಷ್ಟ್ರಪತಿ

Photo Credit :

ಜಯಚಾಮರಾಜೇಂದ್ರ ಒಡೆಯರ್ ೧೦೧ ನೇ ಜನ್ಮ ದಿನಾಚರಣೆ : ನೇರಪ್ರಸಾರದಲ್ಲಿ ಪಾಲ್ಗೊಂಡ ಉಪರಾಷ್ಟ್ರಪತಿ

ಮೈಸೂರು: ಮೈಸೂರು ರಾಜ ಸಂಸ್ಥಾನದ ಇಪ್ಪತ್ತೈದನೇ ಮಹಾರಾಜರು ರಾಜಾಡಳಿತ ಹಾಗೂ ಪ್ರಜಾತಂತ್ರ ಎರಡನ್ನೂ ಅನುಭವಿಸಿದ ಜಯಚಾಮರಾಜೇಂದ್ರ ಒಡೆಯರ್ ಅವರ 101 ಜನ್ಮ ದಿನ ವನ್ನಿಂದು ಮೈಸೂರು ಅರಮನೆಯಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಜಯಚಾಮರಾಜೇಂದ್ರ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ದು ಗೌರವ ಅರ್ಪಿಸುವ ಮೂಲಕ ಸ್ಮರಿಸಿದರು.

ಅಂಬಾವಿಲಾಸ ಅರಮನೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಉದ್ಘಾಟನೆ ನೆರವೇರಿಸಿದರು. ನೇರ ಪ್ರಸಾರ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಇಂದು ವಿಶಾಲ ಕರ್ನಾಟಕದ ಕನಸುಗಾರ ಜಯಚಾಮರಾಜೇಂದ್ರ ಒಡೆಯರ್ ಜಯಂತ್ಯುತ್ಸವವಾಗಿದ್ದು, ಜೊತೆಗೆ ವರ್ಷಪೂರ್ತಿ ನಡೆದಿದ್ದ ಒಡೆಯರ್ ಸಂಸ್ಮರಣಾ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆದಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಯೂಟ್ಯೂಬ್ ಲೈವ್ ಸ್ಟ್ರೀಮಿಂಗ್ ನಲ್ಲಿ ಕಾರ್ಯಕ್ರಮ ನಡೆದಿದೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಶನ್ ನಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜವಂಶಸ್ಥೆ ಡಾ.ಪ್ರಮೋದದೇವಿ ಒಡೆಯರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು,”ಶ್ರೀ ಜಯಚಾಮರಾಜೇಂದ್ರ ಒಡೆಯರ್ ದಿ ಪಬ್ಲಿಕ್ ಫಿಗರ್” ಎಂಬುದರ ಕುರಿತು ಉಪನ್ಯಾಸ ನಡೆಯುತ್ತಿದೆ.

ಲೈವ್ ಸ್ಟ್ರೀಮಿಂಗ್ ನಲ್ಲಿ ಕೇಂದ್ರ ಮಾಜಿ ಸಚಿವ ಡಾ.ಕರಣ್ ಸಿಂಗ್, ರಾಜ್ಯ ಸಭಾ ಸದಸ್ಯ ಜೈರಾಂ ರಮೇಶ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ, ರಾಜಮನೆತನ ಎಲ್ಲರಿಗೂ ಸಾಮಾಜಿಕ ಜಾಲತಾಣದ ಮೂಲಕವೇ ಆಹ್ವಾನ ನೀಡಿತ್ತು. ಯೂ ಟ್ಯೂಬ್ ಸ್ಟ್ರೀಮಿಂಗ್ ಮೂಲಕ ಕಾರ್ಯಕ್ರಮದ ನೇರ ಪ್ರಸಾರ ನೀಡಲಾಗಿತ್ತು.

ಇಂದು ನಗರದ ಅರಮನೆಯಲ್ಲಿ ಜಯಚಾಮರಾಜೇಂದ್ರ ಒಡೆಯರ್ ಬಹದ್ದೂರ್ ಅವರ 101 ನೇ ಜನ್ಮದಿನೋತ್ಸವವನ್ನು ಮೈಸೂರು ಅರಮನೆ ಮಂಡಳಿ ಮತ್ತು ಶ್ರೀ ನಾಲ್ವಡಿ ಪೌಂಢೇಷನ್ ವತಿಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮೈಸೂರು –ಕೊಡಗು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಮರ್ಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು