News Karnataka Kannada
Thursday, April 25 2024
ಮೈಸೂರು

ಜಿಂದಾಲ್‌ ಗೆ ಭೂಮಿ ಪರಭಾರೆಗೆ ವಿಶ್ವನಾಥ್‌ ಆಕ್ಷೇಪ

Photo Credit :

ಜಿಂದಾಲ್‌ ಗೆ ಭೂಮಿ ಪರಭಾರೆಗೆ ವಿಶ್ವನಾಥ್‌ ಆಕ್ಷೇಪ

ಮೈಸೂರು: ಜಿಂದಾಲ್‌ ಕಂಪನಿಗೆ ಸರ್ಕಾರಿ ಭೂಮಿ ಪರಭಾರೆ ಮಾಡಿರುವ ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌, ರಾಜ್ಯವೇ ಹೊತ್ತಿ ಉರಿಯುತ್ತಿರುವಾಗ ತರಾತುರಿಯಲ್ಲಿ ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯ ಕೊರೊನಾ ಸೋಂಕಿನ ಆರ್ಭಟದಿಂದ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ತರಾತುರಿಯಲ್ಲಿ ಜಿಂದಾಲ್ ಕಂಪನಿಗೆ ಭೂಮಿ ನೀಡಿರುವುದು ಸರಿಯಾದ ಕ್ರಮವಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಹಿಂದೆ ಇದೇ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ಜಿಂದಾಲ್ ಕಂಪನಿಗೆ ಭೂಮಿ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಗಲು ರಾತ್ರಿ ಧರಣಿ ನಡೆಸಿದ್ದರು. ಆದರೀಗ ತರಾತುರಿಯಲ್ಲಿ ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.
ಸದ್ಯ ಇಡೀ ಕರ್ನಾಟಕ ಒತ್ತಿ ಉರಿಯುತ್ತಿದ್ದು, ಈ ಸಂದರ್ಭದಲ್ಲಿ ಯಾರು ಗಮನಿಸುವುದಿಲ್ಲ ಎಂದುಕೊಂಡು ಕದ್ದುಮುಚ್ಚಿ ಜಿಂದಾಲ್ ಕಂಪನಿಗೆ ಸರ್ಕಾರಿ ಭೂಮಿ ಮಾರಾಟ ಮಾಡಲಾಗಿದೆ. ಜಿಂದಾಲ್ ಕಂಪನಿಯಿಂದ ಸರ್ಕಾರಕ್ಕೆ 2 ಸಾವಿರ ಕೋಟಿ ಬಾಕಿ ಬರಬೇಕಿದೆ. ಹೀಗಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್‌ಗೆ ಭೂಮಿ ನೀಡುವ ಬಗ್ಗೆ ಚರ್ಚಿಸಬೇಕೆಂದು ಒತ್ತಾಯಿಸಿದರು.
ಅಲ್ಲದೇ ಜಿಂದಾಲ್ ಕಂಪನಿ ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಬೇಕು. ಕಳೆದ ಸಂಪುಟ ಸಭೆಯಲ್ಲಿ ಜಿಂದಾಲ್ ಪರ ತೆಗೆದುಕೊಂಡಿರುವ ತೀರ್ಮಾನವನ್ನು ಮುಂದಿನ ಸಭೆಯಲ್ಲಿ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.
ನಾನು ಹೇಳದಿದ್ದರೇ ರಾಜ್ಯಕ್ಕೆ ವಂಚನೆ ಮಾಡಿದಂತಾಗುತ್ತದೆ. ಸರ್ಕಾರದ ತಪ್ಪನ್ನು ನಾನು ಹೇಳಿದರೆ ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಈ ರೀತಿ ಹೇಳುತ್ತಿದ್ದಾರೆಂದು ಬಿಂಬಿಸುತ್ತಾರೆ. ಆದರೆ ಸರ್ಕಾರದ ತೀರ್ಮಾನ ರಾಜ್ಯಕ್ಕೆ ಮಾರಕವಾದಾಗ ನಾನು ಹೇಳಲೇ ಬೇಕಾಗುತ್ತದೆ.
ಜಿಂದಾಲ್‌ ಗೆ ಭೂಮಿ ನೀಡಲು ಸಚಿವ ಆನಂದ್ ಸಿಂಗ್ ಕೂಡ ವಿರೋಧ ವ್ಯಕ್ತಡಿಸಿದ್ದರು. ಜನರನ್ನು ರೊಚ್ಚಿಗೆಬ್ಬಿಸಿ ಹೋರಾಟ ಮಾಡಿದ್ದ ಆನಂದ್‌ ಸಿಂಗ್‌, ಈಗ ಏಕೆ ಮಲಗಿದ್ದೀರಿ. ಕಿಕ್ ಬ್ಯಾಕ್ ನಲ್ಲಿ ನಿಮಗೆಷ್ಟು ಸಿಕ್ಕಿದೆ? ಎಂದು ವಿಶ್ವನಾಥ್ ಪ್ರಶ್ನಿಸಿದರು.
ಇದೇ ವೇಳೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ವಿರೋಧ ಪಕ್ಷ ಸತ್ತು ಹೋಗಿರುವುದರಿಂದ ಈ ವಿಚಾರವನ್ನು ನಾನು ಹೇಳುತ್ತಿದ್ದೇನೆ. ಈ ಬಗ್ಗೆ ವಿರೋಧ ಪಕ್ಷದ ಸಿದ್ದರಾಮಯ್ಯ ಏಕೆ ಮಾತನಾಡುತ್ತಿಲ್ಲ. ಸಿದ್ದರಾಮಯ್ಯ ಏಕೆ ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ. ಈ ವಿಚಾರದ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು