News Karnataka Kannada
Thursday, April 25 2024
Cricket
ಮೈಸೂರು

ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲು ಮನವಿ

Photo Credit :

ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲು ಮನವಿ

ಮೈಸೂರು: ಈ ಬಾರಿ ಮೈಸೂರು ದಸರಾವನ್ನು ಸರಳ ಮತ್ತು ಸಂಪ್ರದಾಯಬದ್ಧವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶರಿಗೆ ಮನವಿ ಮಾಡಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ-2020 ಕಾರ್ಯಕ್ರಮವು ಕೋವಿಡ್-19 ಪ್ರಯುಕ್ತ ಅರಮನೆ ಆವರಣದ ವೇದಿಕೆಯಲ್ಲಿ 9 ದಿನಗಳು ನಡೆಯುವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ಕಲಾವಿದರಿಗೆ ಅವಕಾಶ ಕಲ್ಪಿಸುವ ಬಗ್ಗೆ ಚಿಂತಿಸುತ್ತಿರುವುದು ತಿಳಿಬಂದಿದೆ. ಆದರೆ, ಸಾವಿರಾರು ಸ್ಥಳೀಯ ಕಲಾವಿದರು ಕೋವಿಡ್-19 ನಿಂದಾಗಿ ಕಳೆದ 7-8 ತಿಂಗಳುಗಳಿಂದ ಯಾವುದೇ ಕಾರ್ಯಕ್ರಮವಿಲ್ಲದೇ ತುಂಬಾ ಸಂಕಷ್ಟದಲ್ಲಿರುವುದರಿಂದ ಪ್ರಸ್ತುತ ನಡೆಯಲಿರುವ ಮೈಸೂರು ದಸರಾ-2020 ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಸಂಬಂಧ ಈಗಾಗಲೇ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ದ್ಯಾವಪ್ಪನಾಯಕ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾರಕ ಹುಣಸೂರು ಮತ್ತಿತ್ತರು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು