News Karnataka Kannada
Monday, April 22 2024
Cricket
ಮೈಸೂರು

ದಸರಾ ಉದ್ಘಾಟನೆಯಲ್ಲಿ 200 ಮಂದಿಗೆ ಮಾತ್ರ ಅವಕಾಶ  

Photo Credit :

ದಸರಾ ಉದ್ಘಾಟನೆಯಲ್ಲಿ 200 ಮಂದಿಗೆ ಮಾತ್ರ ಅವಕಾಶ  

ಮೈಸೂರು: ರಾಜ್ಯ ಸರ್ಕಾರವು ಕೋವಿಡ್‌ 19 ಕಾರಣದಿಂದಾಗಿ ಈ ಬಾರಿ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸುವ ತೀರ್ಮಾನ ತೆಗೆದುಕೊಂಡಿದ್ದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಮಹೋತ್ಸವ ಉದ್ಘಾಟನೆಗೆ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಉದ್ಘಾಟನಾ ಸಮಾರಂಬಕ್ಕೆ ಸೀಮಿತ ಸಂಖ್ಯೆಯ ಆಹ್ವಾನಿತರು, ಅಧಿಕಾರಿ ವರ್ಗದವರು ಮತ್ತು ಮಾಧ್ಯಮದವರನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶ ಇರದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಿಲ್ಲಾಧಿಕಾರಿ ಬಿ ಶರತ್, ನಗರ ಪೋಲಿಸ್ ಆಯುಕ್ತ ಡಾ. ಚಂದ್ರಗುಪ್ತ, ಡಿಸಿಪಿ ಪ್ರಕಾಶ್ ಗೌಡ ಸೇರಿದಂತೆ ಇತರ ಅಧಿಕಾರಿಗಳು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರಳ ಸಮಾರಂಬದ ರೂಪು ರೇಷೆಗಳನ್ನು ಸಿದ್ದಪಡಿಸಿದ್ದಾರೆ.

ಚಾಮುಂಡೇಶ್ವರಿ ದೇವಸ್ಥಾನದ ಪಕ್ಕದಲ್ಲೇ ವೇದಿಕೆ ನಿರ್ಮಿಸಿ 200 ಆಸನಗಳಿಗೆ ಮೀರದಂತೆ ಕುಳಿತುಕೊಳ್ಳಲು ಶಾಮಿಯಾನದ ವ್ಯವಸ್ಥೆ ಮಾಡಲಾಗುತ್ತಿದೆ. ದಸರಾ ಉದ್ಘಾಟಕರು, ಮುಖ್ಯಮಂತ್ರಿಗಳು, ಸಚಿವರು, ಜನಪ್ರತಿನಿಧಿಗಳಿಗೆ ವೇದಿಕೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಅಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಬಾರದಂತೆ ನಿರ್ಬಂಧ ವಿಧಿಸಲಾಗಿದ್ದು, ಭದ್ರತಾ ಕ್ರಮ, ವಾಹನ ನಿಲುಗಡೆ ಸೇರಿದಂತೆ ದಸರಾ ಉದ್ಘಾಟನೆಗೆ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಶರತ್ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸರಳ ಆಚರಣೆ ಆಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಎಂದಿನ ಸಡಗರ ಸಂಭ್ರಮ ಕಾಣುತ್ತಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು