News Karnataka Kannada
Tuesday, April 23 2024
Cricket
ಮೈಸೂರು

ದಸರಾ, ಪಂಚಲಿಂಗದರ್ಶನ ನಡೆಸುವಂತೆ ಸರ್ಕಾರಕ್ಕೆ ಮನವಿ

Photo Credit :

ದಸರಾ, ಪಂಚಲಿಂಗದರ್ಶನ ನಡೆಸುವಂತೆ ಸರ್ಕಾರಕ್ಕೆ ಮನವಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಹಾಗೂ ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಕಾರ್ಯಕ್ರಮ ನಡೆಸುವಂತೆ ನಗರ ಮತ್ತು ಜಿಲ್ಲಾ ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಮಾಲೀಕರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿ ಮೂಲಕ  ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ  ಮಾತನಾಡಿದ ಮೈಸೂರು ನಗರ ಜಿಲ್ಲಾ ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಮಾಲೀಕರ ಸಂಘದ ಅಧ್ಯಕ್ಷ ಎಂ.ಜಯಶಂಕರ್ ಸ್ವಾಮಿ ಮಾತನಾಡಿ, ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಸುಮಾರು 2500 ಕುಟುಂಬಗಳಿಗಿಂತ ಹೆಚ್ಚು ದೀಪಾಲಂಕಾರ ಆಗುವ ಧ್ವನಿವರ್ಧಕ ವ್ಯವಸ್ಥೆಯ ವೃತ್ತಿಯನ್ನು ಮಾಡುತ್ತಿದ್ದು, ಕಳೆದ ಆರು ತಿಂಗಳಿನಿಂದ ಮಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದಾಗಿನಿಂದ ನಮಗೆ ಯಾವುದೇ ರೀತಿಯ ವ್ಯಾಪಾರ ವಹಿವಾಟು ನಡೆದಿಲ್ಲ. ಸಭೆ ಸಮಾರಂಭಗಳು ಶುಭ ಕಾರ್ಯಗಳು ಇಲ್ಲದೆ ತೀವ್ರ ಸಂಕಷ್ಟದಲ್ಲಿದ್ದು, ಆರ್ಥಿಕವಾಗಿ ಕುಗ್ಗಿ ಹೋಗಿದ್ದೇವೆ. ಬ್ಯಾಂಕ್  ಹಾಗೂ ಇತರೆಡೆ ಪಡೆದಿರುವ ಸಾಲವನ್ನು ಕಟ್ಟಲಾಗದ ಬೀದಿಗೆ ಬೀಳುವ ಪರಿಸ್ಥಿತಿಯಲ್ಲಿದ್ದೇವೆ. ನಮಗೆ ಈವರೆಗೂ ಸರ್ಕಾರದಿಂದ ಹಾಗೂ ಜಿಲ್ಲಾಡಳಿತದಿಂದ ಯಾವುದೇ ರೀತಿಯ ಸಹಾಯ ಸಹಕಾರ ನೀಡಿರುವುದಿಲ್ಲ. ಎಲ್ಲ ವರ್ಗದವರಿಗೂ ಸರ್ಕಾರದಿಂದ ಸಹಾಯ ಸಿಕ್ಕಿದೆ. ಆದರೆ ನಮ್ಮ ವೃತ್ತಿಯವರು ಏನು ಪಾಪ ಮಾಡಿದ್ದಾರೋ ಗೊತ್ತಿಲ್ಲ. ಈ ಸರ್ಕಾರ ಇತ್ತ ಗಮನ ಹರಿಸುತ್ತಿಲ್ಲ. ಈಗಲಾದರೂ ಇತ್ತ ಗಮನ ಹರಿಸಿ  ಈ ಕೂಡಲೇ ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಕೆಲಸಗಾರರಿಗೆ ಸರ್ಕಾರದಿಂದ ಸಹಾಯ ನೀಡಬೇಕೆಂದು ಮನವಿ ಮಾಡಿಕೊಂಡರಲ್ಲದೆ, ಜೀವನ ನಿರ್ವಹಣೆ ಕಷ್ಟಕರವಾಗಿರುವುದರಿಂದ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಸಭೆ ಸಮಾರಂಭ ಹಾಗೂ ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವ ಹಾಗೂ ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಕಾರ್ಯಕ್ರಮವನ್ನು ನಡೆಸಿ ಜೀವನಕ್ಕೆ ದಾರಿ ಮಾಡಬೇಕೆಂದು ಸರ್ಕಾರಕ್ಕೆ  ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿರುವುದಾಗಿ ಹೇಳಿದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಶಿವಕುಮಾರ್, ಭೈರಪ್ಪ, ಪ್ರಧಾನ ಕಾರ್ಯದರ್ಶಿ ನಾಗೇಶ್,  ಪ್ರಸಾದ್, ಖಜಾಂಜಿ ಅನ್ವರ್, ಪ್ರಸಾದ್, ಪ್ರಕಾಶ್, ಆನಂದ್, ಚಂದ್ರು, ಸುರೇಶ್, ರೋಹಿತ್, ರವಿ, ದೇವರಾಜು, ಅಪೂರ್ವ ಸುರೇಶ್, ಬಸವರಾಜ್ ಬಸಪ್ಪ ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು