News Karnataka Kannada
Thursday, April 18 2024
Cricket
ಮೈಸೂರು

ನಟ ಶಿವರಾಜ್ ಕುಮಾರ್ ಕುಟುಂಬ ಸಮೇತರಾಗಿ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ

Photo Credit :

ನಟ ಶಿವರಾಜ್ ಕುಮಾರ್ ಕುಟುಂಬ ಸಮೇತರಾಗಿ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ

ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬ ಸಮೇತರಾಗಿ ಚಾಮರಾಜೇಂದ್ರ ಮೃಗಾಲಯಕ್ಕೆ ಗುರುವಾರ ಭೇಟಿ ನೀಡಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಸಿನಿಮಾ ಚಿತ್ರೀಕರಣ ಬಿಡುವಿನ ಸಂದರ್ಭದಲ್ಲಿ ಮೃಗಾಲಯಕ್ಕೆ ಭೇಟಿ ನೀಡಿದ ಶಿವರಾಜ್‌ ಕುಮಾರ್‌ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಳಿಯನ ಜೊತೆ ಮೃಗಾಲಯದ ಸುತ್ತ ಅಡ್ಡಾಡಿ, ಪ್ರಾಣಿ-ಪಕ್ಷಿಗಳು ವೀಕ್ಷಿಸಿದರು. ಅಲ್ಲದೇ ಅವುಗಳ ಚಲನವಲನ ಗಮನಿಸಿ ಮನರಂಜನೆ ಪಡೆದರು.

ಅಲ್ಲದೇ, ತಾವೇ ದತ್ತು ಪಡೆದ ಪಾರ್ವತಿ ಆನೆಗೆ ಆಹಾರ ತಿನ್ನಿಸಿ ಖುಷಿಪಟ್ಟರು. ಇದೇ ವೇಳೆ ಶಿವರಾಜ್ ಕುಮಾರ್ ಮೃಗಾಲಯದ ನಿರ್ವಹಣೆ ಕಾರ್ಯ ಹೇಗೆ ಸಾಗಿದೆ ಹಾಗೂ ಮೃಗಾಲಯದ ಬಗ್ಗೆ, ಪ್ರಾಣಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ʻಲಾಕ್​ಡೌನ್ ಮುಗಿದ ಮೇಲೆ ನಾನು ಮೊದಲ ಬಾರಿಗೆ ಬೆಂಗಳೂರು ಬಿಟ್ಟು ಹೊರಗೆ ಬಂದಿದ್ದೇನೆ. 6 ತಿಂಗಳ ನಂತರ ಮೊದಲು ಬಂದಿದ್ದೆ ಮೈಸೂರಿಗೆ. ಇಲ್ಲಿನ ಮೃಗಾಲಯ ನೋಡಿ ಖುಷಿಯಾಗಿದೆ. ಪ್ರಾಣಿಗಳನ್ನು ನೋಡಿದ ತಕ್ಷಣ ಎಂ.ಪಿ.ಶಂಕರ್ ನೆನಪಾದರು. ಅಪ್ಪಾಜಿ ಜೊತೆಗಿನ ಸಿನಿಮಾ ನೆನಪಾಯ್ತು. ಮೃಗಾಲಯಕ್ಕೆ ಭೇಟಿ ಕೊಟ್ಟಿದ್ದು ಖುಷಿಯಾಯಿತುʼ ಎಂದು ಸಂತೋಷ ಹಂಚಿಕೊಂಡರು.

ಮೃಗಾಲಯಕ್ಕೆ ನಟ ಶಿವರಾಜ್‌ ಕುಮಾರ್‌ ಭೇಟಿ ನೀಡಿದ ವಿಚಾರ ತಿಳಿದು ಅಭಿಮಾನಿಗಳು ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಿ ಅವರೂ ಖುಷಿಪಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು