News Karnataka Kannada
Tuesday, April 16 2024
Cricket
ಮೈಸೂರು

ಪತ್ನಿ, ಇಬ್ಬರು ಮಕ್ಕಳು, ಅತ್ತೆಯನ್ನೂ ಕೊಲೆಗೈದ ದುಷ್ಕರ್ಮಿ

Photo Credit :

ಪತ್ನಿ, ಇಬ್ಬರು ಮಕ್ಕಳು, ಅತ್ತೆಯನ್ನೂ ಕೊಲೆಗೈದ ದುಷ್ಕರ್ಮಿ

ಮೈಸೂರು: ಇಲ್ಲೊಬ್ಬ ಕಿರಾತಕ ಮನೆಯಲ್ಲಿ ಮಲಗಿದ್ದ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ಅತ್ತೆಯ ತಲೆ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದು, ಮೈಸೂರಿನ ಜನತೆ ಬೆಚ್ಚಿಬಿದ್ದಿದ್ದಾರೆ.
ಚಾಮೇಗೌಡನಹುಂಡಿ ಗ್ರಾಮದಲ್ಲಿ ನಿನ್ನೆ(ಬುಧವಾರ) ರಾತ್ರಿ ಈ ದುರ್ಘಟನೆ ನಡೆದಿದೆ. ಮಣಿಕಂಠಸ್ವಾಮಿಯ ಅತ್ತೆ ಕೆಂಪಾಜಮ್ಮ(60), ಪತ್ನಿ ಗಂಗಾ(28), ಮಕ್ಕಳಾದ ರೋಹಿತ್(4) ಮತ್ತು ಸಾಮ್ರಾಟ್(2) ಮೃತ ದುರ್ದೈವಿಗಳು. ಈ ನಾಲ್ವರನ್ನು ಮಣಿಕಂಠಸ್ವಾಮಿಯೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ಗಂಗಾ ಗರ್ಭಿಣಿಯಾಗಿದ್ದಳು.
ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠಸ್ವಾಮಿಗೆ ಕುಡಿತದ ಚಟ ಇತ್ತು. ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಈತ, ಕುಡಿದ ಅಮಲಿನಲ್ಲಿ ಅತ್ತೆ, ಹೆಂಡತಿ, ಇಬ್ಬರು ಮಕ್ಕಳ ತಲೆಯನ್ನು ಕಬ್ಬಿಣದ ರಾಡಿನಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ನಾಲ್ವರು ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮಣಿಕಂಠಸ್ವಾಮಿ ತಲೆ ಮರೆಸಿಕೊಂಡಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸರಗೂರು ಪಿಎಸ್ಐ ದಿವ್ಯಾ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಭೀಕರ ಹತ್ಯೆಯ ದೃಶ್ಯ ನೋಡಿದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು