News Karnataka Kannada
Tuesday, April 16 2024
Cricket
ಮೈಸೂರು

ಪತ್ರಕರ್ತರು ವಸ್ತುನಿಷ್ಠ ವರದಿಗೆ ಆದ್ಯತೆ ನೀಡಬೇಕು: ಶಿವಾನಂದ ತಗಡೂರು

Photo Credit :

ಪತ್ರಕರ್ತರು ವಸ್ತುನಿಷ್ಠ ವರದಿಗೆ ಆದ್ಯತೆ ನೀಡಬೇಕು: ಶಿವಾನಂದ ತಗಡೂರು

ಮೈಸೂರು: ಕಿರಿಯ ಪತ್ರಕರ್ತರು ಹಿರಿಯ ಪತ್ರಕರ್ತರ ಮಾರ್ಗದರ್ಶನದಲ್ಲಿ  ವಸ್ತುನಿಷ್ಠ ವರದಿ ನೀಡುವಲ್ಲಿ ಗಮನ ಹರಿಸುವುದರೊಂದಿಗೆ  ಪತ್ರಕರ್ತರು ಬಹಳ ಎಚ್ಚರಿಕೆಯಿಂದ ಸಮಾಜಕ್ಕೆ ತಪ್ಪು ಸಂದೇಶ ನೀಡದಂತೆ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಲಹೆ ನೀಡಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ 2019-20ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ರೇಕಿಂಗ್ ನೀಡುವ ಧಾವಂತದಲ್ಲಿ ಸಾಕಷ್ಟು ಮುಜುಗರಕ್ಕೆ ಒಳಗಾಗಿರುವ ಪ್ರಸಂಗಗಳು ನಡೆಯುತ್ತಿದ್ದು, ಇಂದಿನ ಪತ್ರಿಕೋದ್ಯಮ ಸಮೂಹ ಮಾಧ್ಯಮಗಳ ಹೊಡೆತಕ್ಕೆ ಸಿಲುಕಿವೆ. ಇವೆಲ್ಲವನ್ನು ಮೆಟ್ಟಿ ನಿಲ್ಲುವ ಪರಿಸ್ಥಿತಿ ಪತ್ರಕರ್ತರಿಗೆ ಎದುರಾಗಿದೆ ಎಂದು ಹೇಳಿದರಲ್ಲದೆ, ಖ್ಯಾತ ಹಿರಿಯ ಪತ್ರಕರ್ತ ದಿ.ರಾಜಶೇಖರ ಕೋಟಿ ಹೆಸರಿನಲ್ಲಿ ಪ್ರಶಸ್ತಿ ನೀಡಲು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧರಿಸಿದ್ದು,  ಎಲ್ಲಾ ಕಾರ್ಯನಿರತ ಪತ್ರಕರ್ತರಿಗೂ ಕೂಡ ರಾಜ್ಯ ಸರ್ಕಾರದಿಂದ ಹೆಲ್ತ್ ಕಾರ್ಡ್ ದೊರೆಯಲಿದೆ ಎಂದು ಇದೇ ವೇಳೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ ಅವರು ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಪರ್ತಕರ್ತರ ಮಕ್ಕಳನ್ನು ಸನ್ಮಾನಿಸಿ, ಪುರಸ್ಕರಿಸಿದರು. ಬಳಿಕ ಮಾತನಾಡಿದ ಅವರು, ತಂದೆ ತಾಯಿಯರನ್ನು ಕಂಡು ಮಕ್ಕಳು ತಮ್ಮ ಭವಿಷ್ಯದಲ್ಲಿ ಏನಾಗಬೇಕೆಂದು ಕನಸು ಕಾಣುತ್ತಾರೆ, ಪತ್ರಿಕಾ ರಂಗದಲ್ಲಿ ಕೆಲಸ ಮಾಡುವ ಪತ್ರಕರ್ತರ ಮಕ್ಕಳು ಹಾಗೆಯೇ ಪತ್ರಿಕಾ ರಂಗದಲ್ಲಿ ಕೆಲಸಮಾಡುವ ಮನೋಭಾವವನ್ನು ಬೆಳಸಿಕೊಳ್ಳಬೇಕು. ಒಂದು ಪೀಳಿಗೆಯ ಜನರಿಗೆ ಪತ್ರಿಕೆ ಒಂದು ಮುಖ್ಯವಾದ ಅಂಗ, ಪತ್ರಿಕಾ ರಂಗವನ್ನು ಮುಂದುವರಿಸಿಕೊಂಡು ಹೋಗ ಬೇಕಾಗಿರುವುದು ನಮ್ಮ ಸಮಾಜಕ್ಕೆ ಬಹಳ ಅತ್ಯವಶ್ಯಕವಾಗಿದೆ. ಇದರ ಕುರಿತು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಹೇಳಿದರು

ಯುವ ಪತ್ರಕರ್ತರು ಹಿರಿಯ ಪತ್ರಕರ್ತರು ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ಎಲ್ಲ ಉದ್ಯೋಗಕ್ಕೆ ಸಲ್ಲುವ ಭದ್ರತೆ, ಪತ್ರಿಕಾರಂಗದಲ್ಲಿ  ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಸಲ್ಲಬೇಕು. ಕೇವಲ ಅಂಕಗಳಿಂದ ಮಕ್ಕಳ ಪ್ರತಿಭೆಯನ್ನು ಗುರುತಿಸದೆ, ಅವರಲ್ಲೇ ಇರುವಂತಹ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು ಎಂದರು.

ಕಾರ್ಯಕ್ರಮದಲಿ ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ,  ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ ಮಹೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ಲೊಕೇಶ್ ಬಾಬು ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು