News Karnataka Kannada
Sunday, April 21 2024
Cricket
ಮೈಸೂರು

ಬೇಡಿಕೆ ಈಡೇರಿಕೆಗಾಗಿ ಅತಿಥಿ ಶಿಕ್ಷಕ, ಉಪನ್ಯಾಸಕರ ಮನವಿ

Photo Credit :

ಬೇಡಿಕೆ ಈಡೇರಿಕೆಗಾಗಿ ಅತಿಥಿ ಶಿಕ್ಷಕ, ಉಪನ್ಯಾಸಕರ ಮನವಿ

ಮೈಸೂರು: ರಾಜ್ಯದಾದ್ಯಂತ ಶಾಲಾ, ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು ತಮ್ಮ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಆನ್ ಲೈನ್ ಚಳವಳಿ ಶುರು ಮಾಡಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿರುವ ಕಾರಣದಿಂದ ಕೆಲಸವೂ ಇಲ್ಲದೆ ಸಂಬಳವೂ ಇಲ್ಲದೆ ಪರದಾಡುತ್ತಿರುವ ಇವರು ಕೆಲವು ಬೇಡಿಕೆಗಳನ್ನು ಮುಂದಿಟ್ಟು ಸರ್ಕಾರದ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ.

ರಾಜ್ಯದಾದ್ಯಂತ ಸಾವಿರಾರು ಮಂದಿ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು ಸರ್ಕಾರ ಗೌರವಧನದಂತೆ ತಿಂಗಳಿಗೆ ವೇತನವನ್ನು ನೀಡುತ್ತಿದೆ. ಇದನ್ನೇ ನಂಬಿಕೊಂಡು ಜೀವನ ಸಾಗಿಸುವ ಇವರ ಬದುಕು ಈಗ ಮೂರಾಬಟ್ಟೆಯಾಗಿದೆ. ಸರ್ಕಾರ ನೀಡಬೇಕಾದ ಸಂಬಳವನ್ನು ಮಾರ್ಚ್ 24 ರಿಂದ ಇಲ್ಲಿಯವರೆಗೂ ನೀಡದ ಕಾರಣದಿಂದ ಇವರ ಹೊಟ್ಟೆಗೆ ತಣ್ಣೀರು ಬಟ್ಟೆ ಎನ್ನುವಂತಾಗಿದೆ.

ಅತಿಥಿ ಶಿಕ್ಷಕರು, ಉಪನ್ಯಾಸಕರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ಉಮಾದೇವಿ ಅವರ ಮುಂದಾಳತ್ವದಲ್ಲಿ ಈಗಾಗಲೇ ಚಳುವಳಿ ನಡೆಸಿದ್ದು, ಆನ್ ಲೈನ್ ಮೂಲಕ ಪ್ರತಿಭಟನೆ ನಡೆಸುತ್ತಿರುವುದು ಏಕೆ ಎಂಬುದನ್ನು ಹೊರ ಹಾಕಿರುವ ಅವರು ತಮ್ಮ ಸಮಸ್ಯೆಗಳನ್ನು ಸರ್ಕಾರದ ಮುಂದೆ ತೆರೆದಿಟ್ಟಿದ್ದಾರೆ. ಕೋವಿಡ್ -19 ನಿಂದಾಗಿ ಉಂಟಾಗಿದ್ದ ಲಾಕ್ ಡೌನ್ ಸಂದರ್ಭದಲ್ಲಿ ಹಾಗೂ ನಂತರದ ದಿನಗಳಲ್ಲಿಯೂ ಸಹ ಅತಿಥಿ ಉಪನ್ಯಾಸಕರು, ಶಿಕ್ಷಕರ ಸಮಸ್ಯೆ ಹೆಚ್ಚಾಗಿದ್ದು. ರಾಜ್ಯದಲ್ಲಿ ಸಹಸ್ರಾರು ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಇವತ್ತಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಅವರಿಗೆ ನೀಡಲಾಗುತ್ತಿರುವ ಸಂಬಳವು ಯಾವ ಮೂಲೆಗೂ ಸಾಕಾಗುವುದಿಲ್ಲ ಪುಡಿಗಾಸು ಸಂಬಳಕ್ಕೂ ಅವರು ತಿಂಗಳಾನುಗಟ್ಟಲೆ ಕಾಯುವ ದುಸ್ಥಿತಿ ಇದೆ.  ಹಿಂದಿನಿಂದಲೂ ಸಹ ಸರ್ಕಾರ ಇವರಿಗೆ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದ್ದು. ಕೊಡುತ್ತಿದ್ದ ಸಂಬಳವೂ ಸಹ ಸರಿಯಾದ ಸಮಯಕ್ಕೆ ಬರುತ್ತಿರಲಿಲ್ಲ.

ಸರ್ಕಾರ ಮಾಧ್ಯಮಗಳ ಮುಂದೆ ಯಾವುದೇ ಕಾರಣಕ್ಕೂ ಲಾಕ್ಡೌನ್ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಉದ್ಯೋಗಿಗಳಿಗೆ ಸಂಬಳವನ್ನು ನಿಲ್ಲಿಸಬಾರದು ಎಂದು ಹೇಳಿದೆ. ಆದರೆ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ದುಡಿಯುತ್ತಿರುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಮಾರ್ಚ್ 24 ರಿಂದ ಇಲ್ಲಿಯವರೆಗೂ ಸಂಬಳ ನೀಡಿಲ್ಲ. ಲಾಕ್ ಡೌನ್ ಮುಂಚಿನಿಂದಲೂ ಇವರು ಜೀವನ  ಸಂಕಷ್ಟಮಯವಾಗಿತ್ತು. ಕೋವಿಡ್-19 ಸಂದರ್ಭದಲ್ಲಿ ಅಂತೂ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದ್ದು, ಸರ್ಕಾರಗಳು ಶಿಕ್ಷಕರು ಹಾಗೂ ಉಪನ್ಯಾಸಕರನ್ನು  ಖಾಯಂ ನೇಮಕಾತಿ ಮಾಡಿಕೊಳ್ಳುವ ಬದಲು ‘ಅತಿಥಿ’ ಎಂಬ ಪದದ ಮೂಲಕ ಕಡಿಮೆ ಸಂಬಳವನ್ನು ನೀಡಿ ನಿರುದ್ಯೋಗಿ  ಯುವಜನರನ್ನು ಶೋಷಣೆ ಮಾಡಲಾಗುತ್ತಿದೆ. ಹಲವು ಶಿಕ್ಷಕರು 20- 25 ವರ್ಷಗಳ ಕಾಲ ಕಾರ್ಯನಿರ್ವಹಿಸಿರುವ ಉದಾಹರಣೆಗಳಿವೆ! ಅತಿಥಿ ಶಿಕ್ಷಕ, ಉಪನ್ಯಾಸಕರಾಗಿಯೇ ಯಾವುದೇ ಜೀವನ ಭದ್ರತೆ ಇಲ್ಲದೇ ಮುಂದಿನ ಭವಿಷ್ಯದ ಬಗ್ಗೆ ಆತಂಕದಲ್ಲಿಯೇ ಜೀವನ ಸಾಗಿಸಬೇಕಾಗಿದೆ ಎಂದು ಅಳಲು ತೋಡಿಕೊಂಡಿರುವ  ಅತಿಥಿ ಶಿಕ್ಷಕರು, ಉಪನ್ಯಾಸಕರು ತಮಗೆ ನೀಡಲು  ಬಾಕಿ ಇರುವ ಸಂಬಳವನ್ನು ಈ ಕೂಡಲೇ ವಿತರಿಸಿ. ಜತೆಗೆ ಕೂಡಲೇ ಲಾಕ್ ಡೌನ್ ಸಂದರ್ಭದ 3 ತಿಂಗಳ ಸಂಬಳವನ್ನು ಬಿಡುಗಡೆ ಮಾಡಿ ಜತೆಗೆ  ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು