News Karnataka Kannada
Thursday, April 18 2024
Cricket
ಮೈಸೂರು

ಮಂಚನಬೆಲೆಯಲ್ಲಿ ಅಮ್ಯೂಸ್‍ಮೆಂಟ್ ಪಾರ್ಕ್ ನಿರ್ಮಾಣದ ಚಿಂತನೆ

Photo Credit :

ಮಂಚನಬೆಲೆಯಲ್ಲಿ ಅಮ್ಯೂಸ್‍ಮೆಂಟ್ ಪಾರ್ಕ್ ನಿರ್ಮಾಣದ ಚಿಂತನೆ

ರಾಮನಗರ: ಮಂಚನಬೆಲೆ ಜಲಾಶಯವನ್ನು ಪ್ರವಾಸಿ ತಾಣವನ್ನಾಗಿಸುವ ದೃಷ್ಠಿಯಿಂದ ಇಲ್ಲಿ ಅಮ್ಯೂಸ್‍ಮೆಂಟ್ ಪಾರ್ಕ್ ನಿರ್ಮಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಜಿಲ್ಲೆಯ ಮಂಚನಬೆಲೆ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಜಲಾಶಯಕ್ಕೆ ಬಾಗೀನ ಅರ್ಪಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಿರುವ ರಾಮನಗರ ಜಿಲ್ಲೆಯ ಮಂಚನಬೆಲೆ ಜಲಾಶಯದ ಬಳಿ ಅಮ್ಯೂಸ್‍ಮೆಂಟ್ ಪಾರ್ಕ್ ನಿರ್ಮಿಸುವುದರಿಂದ ಜನತೆಗೆ ವಾರಾಂತ್ಯದಲ್ಲಿ ಉತ್ತಮ ಮನರಂಜನಾ ಪಾರ್ಕ್ ಲಭ್ಯವಾಗಲಿದೆ. ಅಲ್ಲದೆ, ಇದರಿಂದ ಅನೇಕ ಮಂದಿಗೆ ಉದ್ಯೋಗದ ಅವಕಾಶಗಳು ತೆರೆದುಕೊಳ್ಳಲಿದೆ. ಉತ್ತಮ ರಸ್ತೆಗಳು ಸಹ ನಿರ್ಮಾಣವಾಗಲಿದೆ. ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಮನರಂಜನಾ ಪಾರ್ಕ್ ಅಭಿವೃದ್ಧಿ ಪಡಿಸುವುದು. ದೋಣಿ ವಿಹಾರ ಸೇರಿದಂತೆ ಹಲವು ಬಗೆಯ ಮನರಂಜನೆಯ ಥೀಮ್‍ಗಳನ್ನು ಒಳಗೊಂಡ ಪಾರ್ಕ್ ಅನ್ನು ನಿರ್ಮಿಸಲು ಒತ್ತು ನೀಡಲಾಗುವುದು ಎಂದು ನುಡಿದರು.

ಜಾಗತಿಕ ದರ್ಜೆಗೆ ಅನುಗುಣವಾಗಿ ಈ ಅಮ್ಯೂಸ್‍ಮೆಂಟ್ ಪಾರ್ಕ್ ನಿರ್ಮಿಸಲಾಗುವುದು. ಅಂತರರಾಷ್ಟ್ರೀಯ ಮಟ್ಟದಲ್ಲಿ ಈ ಪಾರ್ಕ್ ಅನ್ನು ನಿರ್ಮಿಸುವ ಬಗ್ಗೆ ಅತ್ಯುತ್ತಮ ಸಂಸ್ಥೆಗಳ ಮೂಲಕ ವಿಸ್ಕøತ ಯೋಜನಾ ವರದಿಯನ್ನು ಸಿದ್ಧಪಡಿಸಿ ಅನುಮೋದನೆ ಪಡೆದುಕೊಂಡ ಬಳಿಕ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಜೊತೆಗೂಡಿದ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು, ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ.ನಾರಾಯಣ ಗೌಡ ಮತ್ತು ಸಂಸದ ಡಿ.ಕೆ. ಸುರೇಶ್ ಹಾಗೂ ಮಾಗಡಿ ಶಾಸಕ ಎ.ಮಂಜುನಾಥ್ ಅವರುಗಳು ಮಂಚನಬೆಲೆ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿಪಂ ಸಿಇಒ ಇಕ್ರಂ, ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು