News Karnataka Kannada
Monday, April 22 2024
Cricket
ಮೈಸೂರು

ಮಾದಕ ವಸ್ತು ವಿರುದ್ದ ಪೊಲೀಸ್ ಕಾರ್ಯಾಚರಣೆ

Photo Credit :

ಮಾದಕ ವಸ್ತು ವಿರುದ್ದ ಪೊಲೀಸ್ ಕಾರ್ಯಾಚರಣೆ

ಮೈಸೂರು: ಗಾಂಜಾ ಮತ್ತು ಇತರೇ ಮಾದಕ ವಸ್ತುಗಳ ಮಾರಾಟ ಹಾಗೂ ಸಂಗ್ರಹದ ವಿರುದ್ದ ನಗರ ಪೊಲೀಸರು ಸಮರ ಸಾರಿದ್ದಾರೆ. 

ನಗರ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ ಅವರ ಸೂಚನೆ ಮೇರೆಗೆ, ಡಿ.ಸಿ.ಪಿ. ಡಾ ಎ.ಎನ್. ಪ್ರಕಾಶ್ ಗೌಡ ಅವರ ಮಾರ್ಗದರ್ಶನದಲ್ಲಿ, ಸಿ.ಸಿ.ಬಿ. ಘಟಕದ ಎ.ಸಿ.ಪಿ. ಮರಿಯಪ್ಪರವರ ನೇತೃತ್ವದಲ್ಲಿ 90 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಒಳಗೊಂಡ ನಗರ ಪೊಲೀಸರ ವಿಶೇಷ ತಂಡವು ನಗರದ ನರಸಿಂಹರಾಜ, ಮಂಡಿ, ಉದಯಗಿರಿ ಹಾಗೂ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕ ವಸ್ತುಗಳ ಮಾರಾಟವಾಗುವ ಅನುಮಾನವಿರುವ ಸ್ಥಳಗಳು ಹಾಗೂ ಈ ಹಿಂದೆ ಗಾಂಜಾ/ಮಾದಕ ವಸ್ತುಗಳನ್ನು ಮಾರಾಟ ಮಾಡಿ ದಸ್ತಗಿರಿಯಾಗಿರುವ ವೃತ್ತಿಪರ ಆರೋಪಿಗಳ ಮನೆಗಳ ಮೇಲೆ ಭಾನುವಾರ ದಿಢೀರ್ ದಾಳಿ ಮಾಡಿ ಗಾಂಜಾ/ ಮಾದಕ ವಸ್ತುಗಳ ಮಾರಾಟ/ಸಂಗ್ರಹ ಮಾಡಿರುವ ಬಗ್ಗೆ ಪರಿಶೀಲನೆ ನಡೆಸಿದರು.

ಈ ದಾಳಿ / ಪರಿಶೀಲನೆ ಸಮಯದಲ್ಲಿ ಯಾವುದೇ ರೀತಿಯ ಗಾಂಜಾ/ ಮಾದಕ ವಸ್ತುಗಳು ದೊರೆತಿರುವುದಿಲ್ಲ. ಆದರೆ ಮಾಧ್ಯಮಗಳಲ್ಲಿ ಬೆಂಗಳೂರಿನಲ್ಲಿ ದಾಖಲಾಗಿರುವ ಗಾಂಜಾ/ ಮಾದಕ ವಸ್ತುಗಳ ಪ್ರಕರಣಗಳ ಬಗ್ಗೆ ಪ್ರಸಾರವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವೃತ್ತಿಪರ ಆರೋಪಿಗಳು ತಮ್ಮ ಮನೆಗಳಿಗೆ ಬೀಗ ಹಾಕಿ, ಮನೆ ಖಾಲಿ ಮಾಡಿರುವುದು ಕಂಡು ಬಂದಿದೆ.

ಮೈಸೂರು ನಗರದಲ್ಲಿ ಗಾಂಜಾ ಮತ್ತು ಇತರೇ ಮಾದಕ ವಸ್ತುಗಳ ಮಾರಾಟ, ಸಂಗ್ರಹ ಮತ್ತು ಸಾಗಾಣೆ ನಿಷೇಧ ಸಂಬಂಧ ಮೈಸೂರು ನಗರದ ಪೊಲೀಸರಿಂದ ಇದೇ ರೀತಿಯಾಗಿ ವಿಶೇಷ ಕಾರ್ಯಾಚರಣೆಗಳು ಮುಂದುವರೆಯಲಿದೆ. ಗಾಂಜಾ ಮತ್ತು ಇತರೇ ಮಾದಕ ವಸ್ತುಗಳ ಮಾರಾಟ, ಸಂಗ್ರಹ ಮತ್ತು ಸಾಗಾಣೆ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 100, 2418339 ಗೆ ಮಾಹಿತಿ ನೀಡುವ ಮೂಲಕ ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಬೇಕೆಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು