News Karnataka Kannada
Wednesday, April 24 2024
Cricket
ಮೈಸೂರು

ಮುನ್ನೆಚ್ಚರಿಕೆಯೊಂದಿಗೆ ದಸರಾ ಆಚರಿಸಲು ಸಚಿವ ಸುಧಾಕರ್ ಸೂಚನೆ

Photo Credit :

ಮುನ್ನೆಚ್ಚರಿಕೆಯೊಂದಿಗೆ ದಸರಾ ಆಚರಿಸಲು ಸಚಿವ ಸುಧಾಕರ್ ಸೂಚನೆ

ಮೈಸೂರು: ನಾಡಹಬ್ಬ ದಸರೆಯನ್ನು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಮೂಲಕ ಅತ್ಯಂತ ಸುರಕ್ಷಿತವಾಗಿ ಆಚರಿಸಿ ಎಂದು ವೈದ್ಯಕೀಯ ಶಿಕ್ಷಣ ಸಚಿವ  ಡಾ.ಕೆ.ಸುಧಾಕರ್  ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿರ್ವಹಣೆಯಲ್ಲಿ ಮೈಸೂರು ಜಿಲ್ಲೆಯ ವೈದ್ಯಕೀಯ ಸೌಲಭ್ಯಗಳ ಪರಿವೀಕ್ಷಣೆ ಮತ್ತು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು,  ಮೈಸೂರು ಜಿಲ್ಲೆಯು ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ನಗರ ಎಂದು ಹೆಸರುವಾಸಿಯಾಗಿದ್ದು, ಪ್ರವಾಸಿಗರ ನೆಚ್ಚಿನತಾಣವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವವಿಖ್ಯಾತ ದಸರಾ ಹಬ್ಬವು ಸಮೀಪಿಸುತ್ತಿದೆ. ಆದರೆ ಇತ್ತೀಚಿಗೆ ಜಿಲ್ಲೆಯಲ್ಲಿ ಕೋವಿಡ್-19 ಹೆಚ್ಚುತ್ತಿದ್ದು, ಸೋಂಕನ್ನು ನಿಯಂತ್ರಿಸಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜನರ ನಿರ್ಲಕ್ಷ್ಯ ಧೋರಣೆಯಿಂದಾಗಿ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಹೆಚ್ಚಿನ ಜನಸಂದಣಿ ಉಂಟಾಗುವಎಲ್ಲಾ ಮಾರುಕಟ್ಟೆಗಳು, ಬಸ್ ನಿಲ್ದಾಣಗಳಲ್ಲಿ ಪರೀಕ್ಷೆ ನಡೆಸಿ. ಅಲ್ಲದೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕಅಂತರ ಕಾಯ್ದುಕೊಳ್ಳುವುದನ್ನು ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.

ಕೊರೊನಾ ಸೋಂಕು ಎಂಬುದು ಸೀಮಿತ ದಿನಗಳವರೆಗೆ ಇರುವ ಖಾಯಿಲೆ ಅಲ್ಲ. ಇದೊಂದು ದೀರ್ಘಕಾಲದ ಹೋರಾಟವಾಗಿದ್ದು, ಸೋಂಕನ್ನು ನಿಯಂತ್ರಿಸುವಲ್ಲಿ ಜನರ ಸಹಕಾರವು ಅಗತ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಪಡೆಯನ್ನು ರಚಿಸಿ ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಜೊತೆಗೆ ಸಾವಿನ ಪ್ರಮಾಣವು ಹೆಚ್ಚಾಗಿರುವುದು ಆತಂಕಕಾರಿ ವಿಷಯ. ಆದ್ದರಿಂದ ಜಿಲ್ಲಾದ್ಯಂತ ಇರುವ ಹಿರಿಯ ನಾಗರಿಕರನ್ನು ಗುರುತಿಸಿ, ಅವರಲ್ಲಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ ಎಂದರು.

ಜಿಲ್ಲೆಯ ಪ್ರತಿಯೊಬ್ಬ ಅಧಿಕಾರಿಯೂ ಕೋವೀಡ್-19 ನಿಯಂತ್ರಿಸುವ ಕೆಲಸಕ್ಕೆ ಪ್ರಥಮ ಆದ್ಯತೆ ನೀಡಬೇಕು. ನಂತರ ಇತರೆ ಕೆಲಸಗಳಲ್ಲಿ ನಿರತರಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೋಂಕು ನಿಯಂತ್ರಿಸುವಲ್ಲಿ ಗಂಭೀರವಾಗಿ ಪರಿಗಣಿಸಬೇಕು ಎಂದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಇನ್ನೆರಡು ವಾರಗಳಲ್ಲಿ ಜಿಲ್ಲಾದ್ಯಂತ ಕೋವಿಡ್ ನಿಯಂತ್ರಿಸುವುದಕ್ಕೆ ಈಗಾಗಲೇ ಅನೇಕ ಕ್ರಮ ಕೈಕೊಳ್ಳಲಾಗಿದೆ. ಮೈಸೂರು ನಗರದ ಎಲ್ಲ್ಲ ಮಾರುಕಟ್ಟೆಯ ವ್ಯಾಪಾರಸ್ಥರಿಗೆ ಪ್ರತಿ 15 ದಿನಗಳಿಗೊಮ್ಮೆ ಕೋವಿಡ್ ಪರೀಕ್ಷೆ ನಡೆಸಲು ಕ್ರಮಜರುಗಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕ ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಅಡಗೂರು ಎಚ್.ವಿಶ್ವನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಂ, ಉಪಾಧ್ಯಕ್ಷರಾದ ಎಂ.ವಿ.ಗೌರಮ್ಮ ಸೋಮಶೇಖರ್, ಜಿಲ್ಲಾ ಪಂಚಾಯತ್‍ಸಿಇಒ ಡಿ.ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಡಿಸಿಪಿ ಪ್ರಕಾಶ್‍ಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು