News Karnataka Kannada
Wednesday, April 24 2024
Cricket
ಮೈಸೂರು

ಮೆಡಿಕಲ್ ಆಕ್ಸಿಜನ್ ಸಿಲಿಂಡರನ್ನು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

Photo Credit :

ಮೆಡಿಕಲ್ ಆಕ್ಸಿಜನ್ ಸಿಲಿಂಡರನ್ನು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಮೈಸೂರು,ಮೇ.5:-  ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ಕಾರ್ಯಾಚರಣೆ ನಡೆಸಿ ಮೆಡಿಕಲ್ ಆಕ್ಸಿಜನ್ ಸಿಲಿಂಡರನ್ನು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.

ಕೋವಿಡ್-19 ಸೋಂಕಿತರಿಗೆ ಆಕ್ಸಿಜನ್ ಸಿಲಿಂಡರ್‍ಗಳ ಅವಶ್ಯಕತೆ ಹೆಚ್ಚಾಗುತ್ತಿದ್ದು, ಈ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಮೈಸೂರು ನಗರ ಸಿಸಿಬಿ ಪೊಲೀಸರು ಹಾಗೂ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ  03-05-2021 ರಂದು ರಾತ್ರಿ 7  ಗಂಟೆ ಸಮಯದಲ್ಲಿ ಮೈಸೂರು ನಗರ ಜೆ.ಪಿ.ನಗರದ ಮೈಸೂರು-ನಂಜನಗೂಡು ಮುಖ್ಯ ರಸ್ತೆಯ ಹಾಗೂ ವರ್ತುಲ ರಸ್ತೆಯ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗ ಯಾವುದೇ ದಾಖಲಾತಿಗಳು ಇಲ್ಲದೆ, ಅಕ್ರಮವಾಗಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಆಕ್ಸಿಜನ್ ತುಂಬಿದ್ದ ಜಂಬು (ಡಿ ಟೈಪ್) ಮೆಡಿಕಲ್ ಆಕ್ಸಿಜನ್ ಸಿಲಿಂಡರ್‍ ನ್ನು ಹೊಂದಿದ್ದ ಮಧುಕುಮಾರ ಬಿನ್ ಮಹಾಂತದೇವರು, (37), ಎಸ್. ಹೊಸಕೋಟೆ, ಹೊಸಕೋಟೆ ಪೋಸ್ಟ್ ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ ಎಂಬವನನ್ನು ವಶಕ್ಕೆ ಪಡೆದು, ಆಕ್ಸಿಜನ್ ತುಂಬಿದ್ದ 01- ಜಂಬು (ಡಿ ಟೈಪ್)ಮೆಡಿಕಲ್ ಆಕ್ಸಿಜನ್ ಸಿಲಿಂಡರ್‍ನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು