News Karnataka Kannada
Wednesday, April 17 2024
Cricket
ಮೈಸೂರು

ಮೈಸೂರಲ್ಲಿ ಇನ್ನು ಮುಂದೆ ಮಾಸ್ಕ್‌ ಧರಿಸದಿದ್ದರೆ 200 ರೂ ದಂಡ

Photo Credit :

ಮೈಸೂರಲ್ಲಿ ಇನ್ನು ಮುಂದೆ ಮಾಸ್ಕ್‌ ಧರಿಸದಿದ್ದರೆ 200 ರೂ ದಂಡ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾದ್ಯಂತ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಸೋಂಕು ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಬಿ. ಶರತ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಜಿಲ್ಲೆಯಲ್ಲಿ ಸೋಂಕು ಪರೀಕ್ಷೆಯನ್ನು ಹೆಚ್ಚಳ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಯಿತು. ಸಭೆಯಲ್ಲಿ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ಶರತ್, ಮಾಸ್ಕ್ ಇಲ್ಲದೇ ಎಲ್ಲೆಂದರಲ್ಲಿ ಓಡಾಡಿದರೆ ದಂಡ ಹಾಕಲಾಗುತ್ತದೆ. ಮಾಸ್ಕ್ ಧರಿಸದೆ ತಿರುಗಾಡುವವರಿಗೆ ಕಟ್ಟುನಿಟ್ಟಾಗಿ 200 ರೂ. ದಂಡ ವಿಧಿಸಲು ನಿರ್ಧಾರ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಲೇಬೇಕೆಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಜನಜೀವನ ಆರ್ಥಿಕ ಪರಿಸ್ಥಿತಿ ಇತ್ಯಾದಿಗಳನ್ನು ಗಮನಿಸಿ ಅನ್ಲಾಕ್ ಮಾಡಿದ್ದವು. ಜನರು ಸೋಂಕಿಗೆ ತಾವೇ ಒಳಗಾಗುವವರೆಗೂ ಬುದ್ದಿ ಕಲಿಯಲ್ಲ ಅನ್ನಿಸುತ್ತಿದೆ. ಬೇಕಾ ಬಿಟ್ಟಿ ಮಾಸ್ಕ್ ಧರಿಸುತ್ತಾರೆ, ಕೇವಲ ಗಡ್ಡದ ಮೇಲೆ ಮಾಸ್ಕ್ ಧರಿಸುತ್ತಾರೆ ಇನ್ನು ಮುಂದೆ ಇಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಯಾವುದೇ ರೀತಿಯ ತೊಂದರೆಗಳಿದ್ದರೆ ಮುಕ್ತವಾಗಿ ಬಂದು ಟೆಸ್ಟ್ ಮಾಡಿಸಿ. ಇದರಿಂದ ಆರೋಗ್ಯದ ಜೊತೆ ರೋಗವನ್ನು ತಡೆಯಬಹುದು. ಕೇವಲ ರೋಗ ಲಕ್ಷಣಗಳು ಇದ್ದರೆ ಮಾತ್ರ ಟೆಸ್ಟ್ ಮಾಡಿಸಬೇಕು ಎಂದು ಕೊಳ್ಳಬೇಡಿ ಎಂದು ಅವರು ಹೇಳಿದರು.

ಸಾರ್ವಜನಿಕರು ಡಾಕ್ಟರ್ ಗಳ ಜೊತೆ ಯಾವುದೇ ರೀತಿ ಅಸಭ್ಯವಾಗಿ ನಡೆದುಕೊಂಡರೆ ಎಫ್.ಐ.ಆರ್ ಹಾಕುತ್ತೇವೆ. ಡಾಕ್ಟರ್ ಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸಾರ್ವಜನಿಕರು ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಟೆಸ್ಟ್ ಗಳ ಸಂಖ್ಯೆ ಹೆಚ್ವಿಸುವ ಸಲುವಾಗಿ ಟೀಮ್ ರೆಡಿ ಮಾಡುತ್ತಿದ್ದೇವೆ. ಜಿಲ್ಲಾಧಿಕಾರಿಗಳು ನಾಳೆಯಿಂದ ಮಾಡಿಸುತ್ತೇವೆ ಎಂದಿದ್ದಾರೆ ಎಂದು ಅವರು ತಿಳಿಸಿದರು.ವ್ಯಾಪಾರ ಮಾಡುವ ಸ್ಥಳಗಲ್ಲಿ ಎಚ್ಚರ ವಹಿಸಿ. ಮಳಿಗೆ ವ್ಯಾಪಾರಿಗಳು, ತಿಂಡಿ ವ್ಯಾಪಾರಿಗಳು ಸಾರ್ವಜನಿಕರು ಶಿಸ್ತನ್ನು ಕಾಪಾಡಬೇಕು. ಸಾರ್ವಜನಿಕ ಮುತುವರ್ಜಿ ವಹಿಸಿ ತಾವೇ ತಮ್ಮ ಜವಾಬ್ದಾರಿ ಅರಿಯಬೇಕು ಎಂದು ಡಾ.ಚಂದ್ರಗುಪ್ತ ಸಲಹೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು