News Karnataka Kannada
Wednesday, April 24 2024
Cricket
ಮೈಸೂರು

ಮೈಸೂರಿಗಿದ್ದ ಪ್ರವಾಸಿಗರ ನಿರ್ಬಂಧ ಹಿಂದಕ್ಕೆ

Photo Credit :

ಮೈಸೂರಿಗಿದ್ದ ಪ್ರವಾಸಿಗರ ನಿರ್ಬಂಧ ಹಿಂದಕ್ಕೆ

ಮೈಸೂರು: ಕೋವಿಡ್-19 ವೈರಾಣು ಹರಡದಂತೆ ಮುಂಜಾಗ್ರತ ವಹಿಸುವ ಸಂಬಂಧ ಹೆಚ್.ಡಿ.ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್, ಹೋಂ ಸ್ಟೇ, ರೆಸಾರ್ಟ್, ಲಾಡ್ಜ್, ವಸತಿ ಗೃಹಗಳಿಗೆ ಪ್ರವಾಸ ಮಾಡುವುದು ಹಾಗೂ ಪ್ರವಾಸಿಗರು ಆಗಮಿಸದಂತೆ ನಿರ್ಬಂದಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ತಿಳಿಸಿದ್ದಾರೆ.

ಸರ್ಕಾರದ ಆದೇಶದಲ್ಲಿ ರಾಜ್ಯದ ಕಂಟೈನ್‍ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಚಟುವಟಿಕೆಗಳ ಪುನರ್ ಆರಂಭಕ್ಕೆ ಮತ್ತು ಕಂಟೈನ್‍ಮೆಂಟ್ ವಲಯಗಳಲ್ಲಿ ಲಾಕ್‍ಡೌನ್ ವಿಸ್ತರಿಸಲು ಅನುಮತಿ ನೀಡಲಾಗಿದೆ. ಅದರಂತೆ ಕರ್ನಾಟಕ ಸಾಂಕ್ರಾಮಿಕ ರೋಗಗಳು ಕೋವಿಡ್-19 ರೆಗ್ಯೂಲೇಷನ್ಸ್-2020 ಪ್ರದತ್ತವಾದ ಅಧಿಕಾರ ಚಲಾಯಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರವಾಸಿಗರು ಆಗಮಿಸದಂತೆ ನಿರ್ಬಂದಿಸಿದ್ದ ಆದೇಶವನ್ನು ಜುಲೈ 24ರಂದು ಹಿಂಪಡೆಯಲಾಗಿದ್ದು, ಈ ಆದೇಶವು ಜುಲೈ 25 ರಿಂದ ಅನ್ವಯವಾಗಲಿದೆ ಎಂದು ಡಿಸಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು