News Karnataka Kannada
Tuesday, April 23 2024
Cricket
ಮೈಸೂರು

ಮೈಸೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಪ್ರತಿಭಟನೆ

Photo Credit :

ಮೈಸೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಪ್ರತಿಭಟನೆ

ಮೈಸೂರು: ಎಲ್ ಕೆಜಿ ಮತ್ತು ಯುಕೆಜಿಯನ್ನು ಸರ್ಕಾರಿ ಶಾಲೆಯಲ್ಲಿ ಆರಂಭಿಸುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಮೈಸೂರು ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾ ಪಂಚಾಯತ್ ಕಚೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ರಾಜ್ಯ ಸರ್ಕಾರವು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಅಲಕ್ಷ್ಯ ಮಾಡಿ ಈ ಕಾರ್ಯಕ್ರಮವನ್ನು ಸರ್ಕಾರಿ ಶಾಲೆಯಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಯಾಗಿ ಆರಂಭಿಸುತ್ತಿರುವುದು ಮಹಿಳಾ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮಾರಕವಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಈ ನಿರ್ಧಾರವನ್ನು ತುರ್ತಾಗಿ ಪರಿಗಣಿಸಿ ಹಾಲಿ ಇರುವಂತೆಯೇ ಅಂಗನವಾಡಿ ಕೇಂದ್ರಗಳಲ್ಲಿ ಮುಂದುವರೆಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕೋವಿಡ್-19ರ ಕೆಲಸದಲ್ಲಿ ತೊಡಗಿಸಿಕೊಂಡಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 3,000ರೂ.ಗಳ ಪ್ರೋತ್ಸಾಹಧನ ನೀಡಬೇಕು. ಹಿಡಿಗಂಟು, ಎನ್ ಪಿ.ಎಸ್ ಹಣ ಕಳೆದ 3 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿಲ್ಲ. ತಕ್ಷಣ ಹಣ ಬಿಡುಗಡೆಗೊಳಿಸಿ. ಮಾತೃವಂದನಾ ಮತ್ತು ಭಾಗ್ಯಲಕ್ಷ್ಮಿ ಬಾಂಡ್ ಕೆಲಸದಲ್ಲಿ ನಿರತರಾಗಿರುವ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಿಸಿ, ಸ್ತ್ರೀಶಕ್ತಿ ಗುಂಪಿಗಳಿಗೆ ಸಹಕಾರ ಮಾಡುತ್ತಿರುವ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ನೀಡಿ, ನಗರ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡಗಳಿಗೆ ಜಾಗ ಹಾಗೂ ಕಟ್ಟಡ ನಿರ್ಮಾಣ ಮಾಡಲು ಅನುದಾನವನ್ನು ಬಿಡುಗಡೆ ಮಾಡಲು ಕೇಂದ್ರ/ ರಾಜ್ಯಸರ್ಕಾರಗಳು ಸೂಕ್ತ ಕ್ರಮ ವಹಿಸಿ, ಕಳೆದ 5ವರ್ಷಗಳಿಂದ ಆಯ್ಕೆಯಾಗಿ ಅಂಗನವಾಡಿ ಕಾರ್ಯಕರ್ತೆಯರು ನೇಮಕಗೊಂಡಿರುತ್ತಾರೆ. ಆದರೆ ಇವರುಗಳ ವಾಸಸ್ಥಳ ದೃಢೀಕರಣ, ಶಾಲಾ ದಾಖಲಾತಿಗಳು ಇತ್ಯಾದಿಗಳನ್ನು ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು