News Karnataka Kannada
Sunday, April 14 2024
Cricket
ಮೈಸೂರು

ಮೈಸೂರಿನಲ್ಲಿ ಶೇ.100ಕ್ಕಿಂತ ಹೆಚ್ಚು ಕೋವಿಡ್-19 ಪರೀಕ್ಷೆ: ರೋಹಿಣಿ ಸಿಂಧೂರಿ

Photo Credit :

ಮೈಸೂರಿನಲ್ಲಿ ಶೇ.100ಕ್ಕಿಂತ ಹೆಚ್ಚು ಕೋವಿಡ್-19 ಪರೀಕ್ಷೆ: ರೋಹಿಣಿ ಸಿಂಧೂರಿ

ಮೈಸೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕು ಹರಡುವಿಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಶೇ.100ಕ್ಕಿಂತ ಹೆಚ್ಚು ಕೋವಿಡ್‍-19 ಪರೀಕ್ಷೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಕಳೆದ ಸೆಪ್ಟೆಂಬರ್‍ ನಲ್ಲಿ ನಡೆಸಲಾದ ಕೋವಿಡ್‍-19 ಪರೀಕ್ಷೆಯ ಪ್ರಮಾಣ ಅತೃಪ್ತಿಕರವಾಗಿದ್ದು, ನಿಗದಿತ ಗುರಿಯ ಶೇ.45 ಮಾತ್ರವೇ ಪರೀಕ್ಷೆ ನಡೆಸಲಾಗಿತ್ತು. ಕೋವಿಡ್‍ ಪರೀಕ್ಷೆ ಮಾಡುವುದರಿಂದ ಕೊರೊನಾ ಸೋಂಕಿತರನ್ನು ಮೊದಲೇ ಗುರುತಿಸಲು ಮತ್ತು ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ. ಪರೀಕ್ಷೆ ನಡೆಸುವುದರಿಂದ ಸೋಂಕು ಹರಡುವುದನ್ನು ತಡೆಯಬಹುದಾಗಿದೆ.

ಹೀಗಾಗಿ ಪ್ರಸ್ತುತ ಮೈಸೂರಿನಲ್ಲಿ ಪ್ರತಿನಿತ್ಯ ಶೇ.100ಕ್ಕಿಂತ ಹೆಚ್ಚು ಕೋವಿಡ್‍-19 ಪರೀಕ್ಷೆ ನಡೆಸಲಾಗಿದ್ದು, ಅಕ್ಟೋಬರ್ 7ರಂದು 124% ಸಾಧಿಸಲಾಗಿದೆ. ಕೋವಿಡ್ ಪರೀಕ್ಷೆ ನಡೆಸುವ ಸಲುವಾಗಿ ವಿಶೇಷ ಪರೀಕ್ಷಾ ತಂಡಗಳು, ಅಧಿಕಾರಿಗಳನ್ನು ನಗರ ಮತ್ತು ಜಿಲ್ಲೆಯ ಉಳಿದ ಭಾಗಗಳಿಗೆ ನಿಯೋಜಿಸಲಾಗಿದೆ.

ಮೈಸೂರಿನಲ್ಲಿ ಕೋವಿಡ್‍-19 ನಿರ್ವಹಣೆಗೆ 4 ವಲಯಗಳಾಗಿ ವಿಂಗಡಿಸಲಾಗಿದೆ. ಇದಕ್ಕಾಗಿ ಹಿರಿಯ ಅಧಿಕಾರಿಗಳನ್ನು ತಂಡದೊಂದಿಗೆ ನೇಮಿಸಲಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಕಡಿವಾಣ ಹಾಕಲು ಎಲ್ಲಾ ಪ್ರಯತ್ನಗಳನ್ನು ಮುಂದುವರಿಸಲಿದೆ. ಇದರೊಂದಿಗೆ ಸಾರ್ವಜನಿಕರು ಸಹ ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಜನದಟ್ಟಣೆ ತಪ್ಪಿಸುವ ಜತೆಗೆ ನೈರ್ಮಲ್ಯ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು