News Karnataka Kannada
Saturday, April 13 2024
Cricket
ಮೈಸೂರು

ಮೈಸೂರು ಅರಮನೆಯಲ್ಲಿ ಮನ್ನಾರ್ ಶ್ರೀಕೃಷ್ಣ ಜಯಂತಿ ಆಚರಣೆ

Photo Credit :

ಮೈಸೂರು ಅರಮನೆಯಲ್ಲಿ ಮನ್ನಾರ್ ಶ್ರೀಕೃಷ್ಣ ಜಯಂತಿ ಆಚರಣೆ

ಮೈಸೂರು: ಮನ್ನಾರ್ ಶ್ರೀ ಕೃಷ್ಣ ಜಯಂತಿ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್ ಕುಟುಂಬಸ್ಥರು ಶ್ರೀ ಕೃಷ್ಣ ಜಯಂತಿ ಆಚರಣೆ ಮಾಡಿದ್ದಾರೆ.

ಮೈಸೂರು ಅರಮನೆಯಲ್ಲಿ ಮನ್ನಾರ್ ಶ್ರೀಕೃಷ್ಣ ಜಯಂತಿ ಆಚರಣೆ, ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನೆರವೇರಿದೆ. ಈ ವೇಳೆ ರಾಜವಂಶಸ್ಥರಾದ ಯದುವೀರ್ ಹಾಗೂ ತ್ರಿಷಿಕಾ ದಂಪತಿ ಪುತ್ರ ಆದ್ಯವೀರ್ ಒಡೆಯರ್ ಅವರಿಗೆ ಶ್ರೀಕೃಷ್ಣನ ವೇಷ ತೊಡಿಸಿದ್ದು, ಶ್ರೀಕೃಷ್ಣನ ವೇಷದಲ್ಲಿ ಆದ್ಯವೀರ್ ಕಂಗೊಳಿಸುತ್ತಿದ್ದಾರೆ. ಸಂಭ್ರಮದಿಂದ ತಮ್ಮ ಅಜ್ಜಿಯವರಾದ ಪ್ರಮೋದಾದೇವಿ ಒಡೆಯರ್ ಅವರ ಜೊತೆ ಸೇರಿ ಗೋವಿಗೆ ಫಲಹಾರ ನೀಡಿದರು.

ಮನ್ನಾರ್ ಶ್ರೀಕೃಷ್ಣ ಜಯಂತಿ ಆಚರಣೆ ಬಗ್ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಅರಮನೆ ಸಂಪ್ರದಾಯದಂತೆ ಮನ್ನಾರ್ ಶ್ರೀಕೃಷ್ಣ ಜಯಂತಿಯನ್ನು ಮೈಸೂರು ಅರಮನೆಯಲ್ಲಿ ಶಾಸ್ತ್ರೋಕ್ತವಾಗಿ ಆಚರಿಸಲಾಯಿತು. ನಮ್ಮೆಲ್ಲರಿಗೆ ಶ್ರೀಕೃಷ್ಣ ಸನ್ಮಂಗಳವನ್ನುಂಟು ಮಾಡಲಿ ಎಂದು ಶ್ರೀ ಪ್ರಸನ್ನ ಕೃಷ್ಣಸ್ವಾಮಿಯವರಲ್ಲಿ ಪ್ರಾರ್ಥಿಸಲಾಯಿತು ಎಂದು ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು