News Karnataka Kannada
Saturday, April 20 2024
Cricket
ಮೈಸೂರು

ಮೈಸೂರು ಅರಮನೆ ಆವರಣದಲ್ಲಿ ಗಜಪಡೆಯಿಂದ ತಾಲೀಮು ಆರಂಭ

Photo Credit :

ಮೈಸೂರು ಅರಮನೆ ಆವರಣದಲ್ಲಿ ಗಜಪಡೆಯಿಂದ ತಾಲೀಮು ಆರಂಭ

ಮೈಸೂರು: ಮೈಸೂರು ಅರಮನೆಯಲ್ಲಿ ಬೀಡು ಬಿಟ್ಟಿರುವ ಅಭಿಮನ್ಯು ನೇತೃತ್ವದ ಗಜಪಡೆ ವಿಜಯದಶಮಿಯಂದು ನಡೆಯಲಿರುವ  ಜಂಬೂಸವಾರಿಗಾಗಿ ಅರಮನೆ ಆವರಣದಲ್ಲಿ ತಾಲೀಮು ಆರಂಭಿಸಿವೆ.

ಕಳೆದ ಎರಡು ದಿನಗಳಿಂದ ತಾಲೀಮು ಆರಂಭವಾಗಿದ್ದು, ಆನೆಗಳಿಗೆ ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗುತ್ತಿದೆ. ಈ ಬಾರಿ ಅಭಿಮನ್ಯು ಅಂಬಾರಿ ಹೊರುತ್ತಿರುವುದರಿಂದ ಆತನನ್ನು ಅಂಬಾರಿ ಹೊರಲು ಸಜ್ಜುಗೊಳಿಸಲು ಎಲ್ಲ ರೀತಿಯ ತಾಲೀಮು ಮುಂದಿ ದಿನಗಳಲ್ಲಿ ನಡೆಯಲಿದೆ. ಆನೆಗಳ ಶಕ್ತಿ ಮತ್ತು ಗಾತ್ರಕ್ಕೆ ಅನುಸಾರವಾಗಿ ಬೆಳಿಗ್ಗೆ ಮತ್ತು ಸಂಜೆ ವಿಶೇಷ ಆಹಾರ ಕೊಡಲಾಗುತ್ತದೆ. ಬೆಳಿಗ್ಗೆ ತಾಲೀಮು ನಡೆಸುವ ಮುನ್ನ ಕುಸುರೆ ಎಂದು ಕರೆಯುವ ಹೆಸರು ಕಾಳು, ಹುರುಳಿ ಕಾಳು, ಗೋಧಿ, ಕುಸುಲಕ್ಕಿ ಇವೆಲ್ಲವನ್ನ ಬೇಯಿಸಿ ಉಂಡೆ ಮಾಡಿ ಕೊಡಲಾಗುತ್ತದೆ.

ತಾಲೀಮು ಬಳಿಕ ತರಕಾರಿಗಳನ್ನು ಬೆಣ್ಣೆಯಲ್ಲಿ ಬೇಯಿಸಿ ಕೊಡಲಾಗುತ್ತೆ. ಇವೆಲ್ಲ ತಿಂದ ನಂತರ ಮಧ್ಯಾಹ್ನದಿಂದ ಸಂಜೆಯವರೆಗೆ ಹಸಿರು ಸೊಪ್ಪನ್ನು ನೀಡಲಾಗುತ್ತದೆ. ಸಂಜೆ ಭತ್ತದ ಹುಲ್ಲಿನಲ್ಲಿ ಕುಸುರೆಯ ಸುತ್ತಿ ಭತ್ತವನ್ನ ಬೇಯಿಸಿ ಹಾಕಿ, ಬೆಲ್ಲ ಹಿಂಡಿ, ತೆಂಗಿನ ಕಾಯಿ, ಈರುಳ್ಳಿ, ಬೇಯಿಸಿ ಒಟ್ಟಿಗೆ ಕೊಡಲಾಗುತ್ತದೆ. ಇನ್ನು ಪ್ರತಿ ದಿನ ಆನೆಯೊಂದಕ್ಕೆ ಮುನ್ನೂರರಿಂದ ಐನೂರು ಕೆಜಿಯಷ್ಟು ಹಸಿರು ಸೊಪ್ಪನ್ನು ನೀಡಲಾಗುತ್ತದೆ.

ಅಭಿಮನ್ಯು ಗಜಪಡೆಯ ನಾಯಕನಾಗಿದ್ದು, ಚಿನ್ನದ ಅಂಬಾರಿಯನ್ನು ಆತನೇ ಹೊತ್ತು ಮೆರವಣಿಗೆ ನಡೆಸುವುದರಿಂದ ಮೊದಲಿಗೆ ಭಾರದ ತಾಲೀಮಿನೊಂದಿಗೆ ಆರಂಭವಾಗಿ ಚಿನ್ನದ ಅಂಬಾರಿಯಷ್ಟೇ ತೂಕದ ಮರದ ಅಂಬಾರಿಯನ್ನು ಕಟ್ಟಿ ಅಭ್ಯಾಸ ಮಾಡಲಾಗುತ್ತದೆ. ಅ.25ರಂದು ದಸರಾ ಜಂಬೂ ಸವಾರಿ ನಡೆಯುತ್ತಿರುವುದರಿಂದ ಕೆಲವೇ ದಿನಗಳು ಬಾಕಿ ಇರುವುದರಿಂದ ಗಜಪಡೆಗೆ ದಿನದಿಂದ ದಿನಕ್ಕೆ ತಾಲೀಮು ಕಠಿಣವಾಗುತ್ತಾ ಹೋಗಲಿದೆ. ಇದುವರೆಗೆ ಸಂಗೀತದ ಗಾಡಿ ಎಳೆಯುತ್ತಿದ್ದ ಅಭಿಮನ್ಯು ಈ ಬಾರಿ ಬಹಳ ಮಹತ್ವದ ಅಂಬಾರಿ ಹೊರುವ ಜವಬ್ದಾರಿ ಹೊತ್ತಿದ್ದು ಯಶಸ್ವಿಯಾಗಿ ಪೂರೈಸುವ ಆಶಾಭಾವನೆ ಅರಣ್ಯಾಧಿಕಾರಿಗಳಲ್ಲಿದೆ. ಈತನಿಗೆ ವಿಕ್ರಮ, ಕಾವೇರಿ, ಗೋಪಿ ಮತ್ತು ವಿಜಯ ಸಾಥ್ ನೀಡಲಿದ್ದಾರೆ.

ಕೊರೋನಾ ಸೋಂಕು ತಗುಲುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ವೇಳೆ ಅಂಬಾರಿ ಹೊರುವ ಆನೆಗಳನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ. ಆನೆಗಳ ತೂಕಗಳಿಗೂ ಹೊರಗೆ ಕರೆದೊಯ್ಯಲಾಗುತ್ತಿಲ್ಲ. ಅರಣ್ಯ ಇಲಾಖೆ ಕೂಡ ಕೆಲ ಕಾರ್ಯವಿಧಾನಗಳನ್ನು ಕೈಬಿಟ್ಟಿದ್ದು, ಆನೆಗಳು, ಮಾವುತರು ಹಾಗೂ ಕಾವಾಡಿಗಳೂ ಕೂಡ ಹೊರಗೆಲ್ಲೂ ತೆರಳದಂತೆ ಕಟ್ಟುನಿಟ್ಟಿನ ನಿಯಗಳನ್ನು ಜಾರಿ ಮಾಡಿದ್ದಾರೆ.

ಮೈಸೂರಿನಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಜೆ ಅಲೆಕ್ಸಾಂಡರ್ ಅವರು ಈ ಬಾರಿ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದಾರೆ. ಆನೆಗಳು ಹುಣಸೂರಿನ ವೀರನಹೊಸಳ್ಳಿಯಿಂದ ಹೊರಡುವಾಗ ತೂಕ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ನಡುವೆ ದಸರಾ ಗಜಪಡೆಯೊಂದಿಗೆ ಮೈಸೂರು ಅರಮನೆಗೆ ಆಗಮಿಸಿರುವ ಮಾವುತರು, ಕಾವಾಡಿಗಳು, ಸಹಾಯಕರು ಹಾಗೂ ಆನೆಗಳ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಅರಣ್ಯ ಸಿಬ್ಬಂದಿ ಸೇರಿದಂತೆ 19 ಮಂದಿಗೂ ಕೊರೋನಾ ಪರೀಕ್ಷೆ ಮಾಡಿಸಲಾಗಿದ್ದು, ಎಲ್ಲರ ಫಲಿತಾಂಶವೂ ನೆಗೆಟಿವ್ ಬಂದಿರುವುದು ನೆಮ್ಮದಿ ತಂದಿದೆ. ಆನೆಗಳ ಬಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಆನೆಗಳು ವಾಸ್ತವ್ಯದ ಸ್ಥಳವನ್ನು ಆಗಾಗ್ಗೆ ಸ್ಯಾನಿಟೈಸ್ ಮಾಡುವ ಮೂಲಕ ಎಚ್ಚರಿಕೆ ವಹಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು