News Karnataka Kannada
Saturday, April 13 2024
Cricket
ಮೈಸೂರು

ಮೈಸೂರು ವಿವಿ ಕ್ರಮದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

Photo Credit :

ಮೈಸೂರು ವಿವಿ ಕ್ರಮದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು: ಎಐಡಿಎಎಸ್‍ಒ ಮೈಸೂರು ಜಿಲ್ಲಾ ಸಮಿತಿ ಹಾಗೂ ಮೈಸೂರು ವಿ.ವಿ ವಿದ್ಯಾರ್ಥಿಗಳ ಹೋರಾಟ ಸಮಿತಿ ವತಿಯಿಂದ ಮೈಸೂರು ವಿ.ವಿ.ಯು ತನ್ನ ಅಧೀನದ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತರಾತುರಿಯಲ್ಲಿ ತರಗತಿಗಳನ್ನು ಮತ್ತು ಪರೀಕ್ಷೆಗಳನ್ನು ನಡೆಸುತ್ತಿರುವುದನ್ನು ವಿರೋಧಿಸಿ, ಕ್ರಾಫರ್ಡ್ ಹಾಲ್ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು ಕೊರೋನಾ ತೀವ್ರಗತಿಯಲ್ಲಿ ಏರುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಪ್ರಬಲ ಆಗ್ರಹಕ್ಕೆ ಮಣಿದು ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆಗಳನ್ನು ಹೊರತುಪಡಿಸಿ ಉಳಿದೆಲ್ಲ ವರ್ಷಗಳ ಪರೀಕ್ಷೆಗಳನ್ನು ರದ್ದುಪಡಿಸಿತ್ತು. ಮತ್ತು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ನಿರ್ದೇಶಿಸಿದೆ. ಇದು ಸಮಂಜಸವಾದ ನಿರ್ಧಾರವಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ವಿ.ವಿ ಯು ಆಗಸ್ಟ್ 3 ರಿಂದಲೇ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹಾಜರಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಪುನಾರಂಭಿಸಬೇಕು ಹಾಗೂ 11ನೇ ತಾರೀಕಿನಿಂದ ತರಗತಿಗಳಿಗೆ ಹಾಜರಾಗಬೇಕು ಎಂದು ಸೂಚಿಸಿದೆ. ಮತ್ತು ಪದವಿ ವಿದ್ಯಾರ್ಥಿಗಳಿಗೆ ಆಗಸ್ಟ್ 21ರಿಂದ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 1 ರಿಂದ ಪರೀಕ್ಷೆಗಳನ್ನು ನಡೆಸಲಾಗುವುದು ಎಂಬಿತ್ಯಾದಿ ಅಂಶಗಳನ್ನು ಒಳಗೊಂಡಿರುವ ತಾತ್ಕಾಲಿಕ ವೇಳಾಪಟ್ಟಿಯ ಸುತ್ತೋಲೆಯನ್ನು ಹೊರಡಿಸಿದೆ. ಇದು ವಿ.ವಿ.ಯ ವ್ಯಾಪ್ತಿಯ ಮೈಸೂರು, ಚಾಮರಾಜ ನಗರ, ಹಾಸನ, ಮಂಡ್ಯ ಜಿಲ್ಲೆಗಳ ವಿವಿಧ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಅತಂಕಕ್ಕೆ ಕಾರಣವಾಗಿದೆ.

ಏಕೆಂದರೆ ಬಹುಪಾಲು ಕಾಲೇಜುಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಲ್ಲದೇ ವಿವಿಧ ತಾಲ್ಲೂಕುಗಳ, ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು, ಹಾಸ್ಟೆಗಳಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದು, ಲಾಕ್ ಡೌನ್ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳಿದ್ದು, ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಮತ್ತು ಕೊರೋನಾ ಹಿನ್ನೆಲೆಯಲ್ಲಿ, ಮೈಸೂರು ನಗರದ ಬಹುಪಾಲು ಬಡಾವಣೆಗಳು ಸೇರಿದಂತೆ, ಹಲವು ಪ್ರದೇಶಗಳು, ಹಳ್ಳಿಗಳು ಸಿಲ್‍ಡೌನ್ ಆಗಿವೆ. ಹಾಗಾಗಿ ಅವರು ತಮ್ಮ ಕಾಲೇಜುಗಳಿಗೆ ಬರುವುದು ಕಷ್ಟ ಸಾಧ್ಯ. ಇನ್ನೊಂದೆಡೆ ಬಹುಪಾಲು ವಸತಿನಿಲಯಗಳನ್ನು, ಕೋವಿಡ್ ಕೇರ್ ಸೆಂಟರ್‍ಗಳಾಗಿ ಬಳಸಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಬಳಸುವ ಸಲುವಾಗಿ ಕಾಯ್ದಿರಿಸಲಾಗಿದೆ. ಹಾಗಾಗಿ ಹಾಸ್ಟೆಲ್‍ಗಳನ್ನು ಅವಲಂಬಿಸಿರುವ ವಿದ್ಯಾರ್ಥಿಗಳಿಗೆ ವಾಸ್ತವ್ಯದ ಸಮಸ್ಯೆ ಉಂಟಾಗುತ್ತದೆ. ವಿದ್ಯಾಥಿಗಳು, ಉಪನ್ಯಾಸಕರು, ಸಂಚರಿಸುವಾಗ, ಸಾರ್ವಜನಿಕ ಸ್ಥಳಗಳಲ್ಲಿ, ತರಗತಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯು ಉದ್ಭವಿಸುತ್ತದೆ.  ಅದಲ್ಲದೆ ಕೆಲವು ದಿನಗಳಿಂದ, ಸೋಂಕಿನ ಯಾವುದೇ ಲಕ್ಷಣವಿಲ್ಲದವರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ.  ಸರ್ಕಾರವೇ ನೇಮಿಸಿರುವ ತಜ್ಞರ ಸಮಿತಿಗಳೇ ಮುಂದಿನ ದಿನಗಳಲ್ಲಿ(ಆಗಸ್ಟ್, ಸೆಪ್ಟೆಂಬರ್) ಪ್ರಕರಣಗಳು ಕ್ಷಿಪ್ರಗತಿಯಲ್ಲಿ ಹೆಚ್ಚಳವಾಗುತ್ತವೆ ಎಂದು ವರದಿ ನೀಡಿವೆ. ಅದಲ್ಲದೇ ಪಠ್ಯಕ್ರಮವು ಸಂಪೂರ್ಣವಾಗಿ ಪೂರ್ಣಗೊಂಡಿಲ್ಲದಿರುವುದು ಸೇರಿದಂತೆ, ಅನೇಕ ಶೈಕ್ಷಣಿಕ ಕಾರ್ಯಗಳು ಪೂರ್ತಿಯಾಗಿಲ್ಲ ಇದರ ನಡುವೆಯೇ, ತರಗತಿಗಳನ್ನು ಮಾಡುವುದಾಗಲೀ, ಪರೀಕ್ಷೆಗಳನ್ನು ನಡೆಸುವುದಾಗಲೀ, ವಿದ್ಯಾಥಿಗಳಲ್ಲಿ ಮಾನಸಿಕ ಒತ್ತಡವನ್ನು ಸೃಷ್ಟಿ ಮಾಡುತ್ತದೆ. ಆದ್ದರಿಂದ ವಿ.ವಿ.ಯು, ವಿದ್ಯಾರ್ಥಿಗಳು, ಉಪನ್ಯಾಸಕರು, ಪೋಷಕರುಗಳ ಹಿತದೃಷ್ಟಿಯಿಂದ ತನ್ನ ಸುತ್ತೋಲೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಐಡಿಎಎಸ್‍ಒ ಮೈಸೂರು ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಆಸಿಯಾ ಬೇಗಂ, ಕಾರ್ಯದರ್ಶಿ ಚಂದ್ರಕಲಾ, ಸದಸ್ಯರಾದ ನಿತಿನ್, ಹೋರಾಟ ಸಮಿತಿಯ ಕಿರಣ್, ವಿಷ್ಣುತೇಜಾ ಮುಂತಾದವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು