News Karnataka Kannada
Tuesday, April 16 2024
Cricket
ಮೈಸೂರು

ಮೈಸೂರು: ಸಂಬಳ ಹೆಚ್ಚಳಕ್ಕೆ ಅಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Photo Credit :

ಮೈಸೂರು: ಸಂಬಳ ಹೆಚ್ಚಳಕ್ಕೆ ಅಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12000ರೂ ಮತ್ತು ಬಾಕಿ ಪ್ರೋತ್ಸಾಹ ಧನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಎಐಯು ಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ರೂ ೪೦೦೦ ಮತ್ತು ಕೇಂದ್ರ ಸರ್ಕಾರದಿಂದ ಚಟುವಟಿಕೆಗಳನ್ನು ಆಧರಿಸಿ ನೀಡುವ ಪ್ರೋತ್ಸಾಹ ಧನ ಸರಾಸರಿ 5000-6000, ಎರಡೂ ಸೇರಿ ಸುಮಾರು 9000-10,000 ಪಡೆಯುವಂತೆ ಯೋಜನೆ ಇದೆ. ಇದಕ್ಕೆಸರ್ಕಾರದ ಅನುದಾನವೂ ಇದೆ. ಆದರೆ ಇದುವರೆಗೆ ಸರಿಯಾಗಿ ತಲುಪುತ್ತಿಲ್ಲ. ಅಂತೆಯೇ ಇದಕ್ಕೆ ಇನ್ನೊಂದಿಷ್ಟು ಹಣವನ್ನು ಕಾಋಕರ್ತೆಯರಿಗೆ ಮಾಸಿಕ 12,000 ಸಂಬಳ ಕೊಡುವುದು ಸರ್ಕಾರಕ್ಕೆ ಕಷ್ಟವಲ್ಲ. ಕಳೆದ ಜನವರಿ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಚಳವಳಿಯನ್ನು ಆರೋಗ್ಯ ಮಂತ್ರಿಗಳ ಆಶ್ವಾಸನೆಯೊಂದಿಗೆ ಹಿಂಪಡೆಯಲಾಗಿತ್ತು. ಆದರೆ ಭರವಸೆ ಭರವಸೆಯಾಗಿಯೇ ಉಳಿಯಿತು. ನಂತರದ ದಿನಗಳಲ್ಲಿ ಕೋವಿಡ್ ಮಹಾಮಾರಿ ವಿರುದ್ಧ ಆಶಾ ಕಾರ್ಯಕರ್ತೆಯರು ಕಾರ್ಯಪ್ರವೃತ್ತರಾದರು. ಈ ಹಿನ್ನೆಲೆಯಲ್ಲಿ ಕಳೆದ ಜುಲೈ 10ರಿಂದ 20ರವರೆಗೆ ರಾಜ್ಯದ ಆಶಾ ಕಾರ್ಯಕರ್ತೆಯರು ತಮ್ಮ ಕನಿಷ್ಠ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನ ಡೆಸಿದ್ದರು. ಆರೋಗ್ಯ ಸಚಿವರು ಕ್ರಮ ತೆಗೆದುಕೊಳ್ಳುವುದಾಗಿ ವಚನವಿತ್ತರು. ಬಳಿಕ ಪ್ರತಿಭಟನೆ ಸ್ಥಗಿತಗೊಳಿಸಲಾಗಿತ್ತು. ಆದರೆ ಸರ್ಕಾರದ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ನಾಳೆಯಿಂದ ರಾಜ್ಯದ ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಹೋರಾಟ ನಡೆಸಲಿದ್ದಾರೆಂದು ಎಚ್ಚರಿಸಿದರು.

ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಸಂಬಳ 12,000ಕೂಡಲೇ ಘೋಷಿಸಿ, ಮೇಲಿಂದ ಮೇಲೆ ಎಲ್ಲಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಬೇಕು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಸರ್ ಇತ್ಯಾದಿಗಳನ್ನು ಸಮರ್ಪಕವಾಗಿ ನೀಡಬೇಕು. ಬಾಕಿ ಇರುವ ಪ್ರೋತ್ಸಾಹಧನ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಿ, ಈಗಾಗಲೇ ಘೋಷಿಸಿದ 3000 ಕೋವಿಡ್ ವಿಶೇಷ ಪ್ರೋತ್ಸಾಹಧನವನ್ನು ಇನ್ನೂ ತಲುಪದಿರುವ ಆಶಾ ಕಾರ್ಯಕರ್ತೆಯರಿಗೆ ಪಾವತಿಯಾಗುವಂತೆ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು