News Karnataka Kannada
Wednesday, April 24 2024
Cricket
ಮೈಸೂರು

ಯೋಗಿ ಆದಿತ್ಯನಾಥ್ ಸರ್ಕಾರದ ವಜಾಕ್ಕೆ ಧ್ರುವನಾರಾಯಣ್ ಒತ್ತಾಯ

Photo Credit :

ಯೋಗಿ ಆದಿತ್ಯನಾಥ್ ಸರ್ಕಾರದ ವಜಾಕ್ಕೆ ಧ್ರುವನಾರಾಯಣ್ ಒತ್ತಾಯ

ಮೈಸೂರು: ಉತ್ತರಪ್ರದೇಶ ರಾಜ್ಯದಲ್ಲಿ ದಲಿತ ಹೆಣ್ಣುಮಕ್ಕಳ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಕೂಡಲೇ ಯೋಗಿ ಆದಿತ್ಯನಾಥ್ ಸರ್ಕಾರವನ್ನು ರಾಷ್ಟ್ರಪತಿಗಳು ವಜಾಗೊಳಿಸಬೇಕು ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶ ರಾಜ್ಯದಲ್ಲಿ ದಲಿತ ವರ್ಗಕ್ಕೆ ಸೇರಿದ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಹೆಚ್ಚಾಗಿದೆ. ವಾಲ್ಮೀಕಿ ಸಮುದಾಯಕ್ಕೆ ಸೇರಿದ ಮನೀಷಾ ವಾಲ್ಮೀಕಿ ಎಂಬ ಹೆಣ್ಣುಮಗಳನ್ನು ಅತ್ಯಾಚಾರ ಮಾಡಿ ಅಮಾನವೀಯವಾಗಿ ಕೊಲೆ ಮಾಡಿದ್ದು, ಇಡಿ ದೇಶವೇ ತಲೆತಗ್ಗಿಸುವಂತಾಗಿದೆ. ದೆಹಲಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಲಕಿ ಮೃತದೇಹವನ್ನು ಕುಟುಂಬದವರಿಗೆ ಕೊಡದೆ ಪೊಲೀಸರೇ ಮಧ್ಯರಾತ್ರಿ ಸುಟ್ಟು ಹಾಕಿ ಶವಸಂಸ್ಕಾರ ಮಾಡಿದ್ದು ಆಘಾತವನ್ನುಂಟು ಮಾಡಿದೆ ಎಂದು ಕಿಡಿಕಾರಿದರು.

ಘಟನೆಯ ಕುರಿತು ಈತನಕ ಪ್ರಧಾನಿ ನರೇಂದ್ರಮೋದಿ ಬಾಯಿ ಬಿಡದೆ ಕೂತಿರುವುದು ಅತ್ಯಂತ ಖಂಡನೀಯ ಎಂದರು.

ಎನ್ಸಿಆರ್ಬಿ ವರದಿ ಪ್ರಕಾರ ಉತ್ತರಪ್ರದೇಶ ಮೊದಲ ಸ್ಥಾನದಲ್ಲಿದೆ. ಅತ್ಯಾಚಾರ, ಅಪರಾಧ, ಅಪಹರಣ, ಕೊಲೆ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ೨೦೧೯ರಲ್ಲಿ ದಾಖಲಾಗಿರುವ ೪೭೯೯೯ ಪ್ರಕರಣದಲ್ಲಿ ಉತ್ತರಪ್ರದೇಶದಲ್ಲೇ ೧೧೮೨೯ ಪ್ರಕರಣ ದಾಖಲಾಗಿದೆ. ಹಾಗಾಗಿ, ಇಂತಹ ಸರ್ಕಾರವನ್ನು ತಕ್ಷಣವೇ ರಾಷ್ಟ್ರಪತಿಗಳು ವಜಾಗೊಳಿಸಬೇಕು. ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಭಯದ ವಾತಾವರಣ ನಿರ್ಮಾಣವಾಗಿರುವುದರಿಂದ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ರಾಮಮಂದಿರ ನಿರ್ಮಾಣ ಮಾಡುತ್ತೇವೆಂದು ಹೇಳಿದ ಯೋಗಿ ಆದಿತ್ಯನಾಥ್ ಸರ್ಕಾರ ರಾವಣರ ರಾಜ್ಯ ನಿರ್ಮಾಣ ಮಾಡುತ್ತಿದೆ. ಪ್ರಧಾನಿ ನರೇಂದ್ರಮೋದಿ ಅವರು ಒಂದು ಮಾತನ್ನಾಡದೆಮೌನವಹಿಸಿದ್ದಾರೆ. ದೇಶಾಧ್ಯಂತ ಆಕ್ರೋಶ ಭುಗಿಲೆದ್ದರೂ ಮೋದಿ ಯಾಕೇ ಮೌನವಾಗಿದ್ದಾರೆ ಎಂದು ಟೀಕಿಸಿದರು. ಕುಟುಂಬದವರಿಗೆ ಸಾಂತ್ವನಹೇಳಲು ಹೊರಟ ರಾಹುಲ್ ಗಾಂಧೀ ಅವರನ್ನು ತಡೆದು ಹಲ್ಲೆ ಮಾಡಿದ್ದು ಖಂಡನೀಯ. ಪ್ರಮುಖ ಪಕ್ಷದ ನಾಯಕರನ್ನು ಈರೀತಿಯಾಗಿ ಬಳಸಿಕೊಂಡರೆ ಜನಸಾಮಾನ್ಯರ ಗತಿಯೇನು ಖಾರವಾಗಿ ಪ್ರಶ್ನಿಸಿದರು.

ಇದೇ ವೇಳೆ ಮಾತನಾಡಿದ ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ, ಉತ್ತರಪ್ರದೇಶದಲ್ಲಿ ಅಪರಾಧ ಪ್ರಕರಣಗಳು ಮಿತಿಮೀರಿವೆ. ಅಲ್ಲಿ ದಲಿತರು, ಮಹಿಳೆಯರು, ಹಿಂದುಳಿದವರ ಮೇಲೆ ರಾಜಾರೋಷವಾಗಿ ಹಲ್ಲೆಯಾಗುತ್ತಿವೆ. ಯೋಗಿ ಆದಿತ್ಯನಾಥ್ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲವಾಗಿದೆ

ಅಲ್ಲಿನ ಪೊಲೀಸರು ಎಫ್ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ. ಜೊತೆಗೆ ಯುವತಿಯ ಶವಸಂಸ್ಕಾರವನ್ನು ಪೊಲೀಸರೇ ಮಾಡಿದ್ದಾರೆ. ಸಾಕ್ಷಿಯನ್ನು ನಾಶಪಡಿಸಲು ಪೊಲೀಸರೇ ಸಹಕರಿಸಿದ್ದಾರೆ. ದೇಶದಲ್ಲೇ ಎಲ್ಲಕ್ಕಿಂತ ಹೆಚ್ಚಿನ ಅಪರಾಧ ಪ್ರಕರಣಗಳು ಉತ್ತರಪ್ರದೇಶದಲ್ಲಿ ನಡೆಯುತ್ತಿದೆ ಎಂದು ಯುಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು