News Karnataka Kannada
Tuesday, April 23 2024
Cricket
ಮೈಸೂರು

ವಿಳಂಬ ಕಾಮಗಾರಿ: ಶಾಸಕರಿಂದ ಅಧಿಕಾರಿಗಳ ತರಾಟೆ

Photo Credit :

ವಿಳಂಬ ಕಾಮಗಾರಿ: ಶಾಸಕರಿಂದ ಅಧಿಕಾರಿಗಳ ತರಾಟೆ

ಮೈಸೂರು: ಇಂದು ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಚಾಮರಾಜ ಕ್ಷೇತ್ರದ ಶಾಸಕ ಎಲ್ ನಾಗೇಂದ್ರ  ಅವರು ರಸ್ತೆ ಕಾಮಗಾರಿ ಪರಿಶೀಲನೆ ಮಾಡಿದ್ದು ಕಾಮಗಾರಿಗಳು ವಿಳಂಬವಾಗಿರುವುದಕ್ಕೆ  ಅಧಿಕಾರಿಗಳನ್ನು  ತರಾಟೆಗೆ ತೆಗೆದುಕೊಂಡರು.

ಗುದ್ದಲಿ ಪೂಜೆ ನೆರವೇರಿಸಿ ತಿಂಗಳುಗಳೇ ಕಳೆದರೂ ಕಾಮಗಾರಿ ವಿಳಂಬ ಹಿನ್ನಲೆಯಲ್ಲಿ ಇಂದು ಶಾಸಕ ನಾಗೇಂದ್ರ ಕಾಮಗಾರಿ ಪರೀಶಿಲನೆ ನಡೆಸಿದರು.ವಿಜಯ ನಗರದ ವಾರ್ಡ್ ನಂಬರ್ 2,3. ಮತ್ತು 20 ರ ಮುಖ್ಯರಸ್ತೆಗೆ ಈ ಹಿಂದೆ 4.98 ಕೋಟಿ ರೂ. ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಗುದ್ದಲಿ ಪೂಜೆ  ಮುಗಿಸಿ ತಿಂಗಳುಗಳೇ ಕಳೆದರೂ ಕಾಮಗಾರಿ  ಪೂರ್ಣಗೊಳಿಸದ  ಅಧಿಕಾರಿಗಳ ವಿರುದ್ದ ಶಾಸಕರು ಗರಂ ಆದರು. ತಕ್ಷಣ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರಾಭಿವೃದ್ದಿ ಇಲಾಖೆಯ ವಿಶೇಷ ಅನುದಾನದಲ್ಲಿ ವಿಜಯನಗರ 1ನೇ ಹಂತ ವಾಟರ್ ಟ್ಯಾಂಕ್ ಬಳಿಯಿಂದ ಹೊರವರ್ತುಲ ರಸ್ತೆಯವರೆಗೆ 3.15 ಕಿ.ಮೀ ಉದ್ದದ ರಸ್ತೆ ಅಗಲೀಕರಣ, ಡಾಂಬರೀಕರಣ, ಅಗತ್ಯವಿರುವಕಡೆ ವಾಕ್ಸ್ ಚರಂಡಿ ನಿಮಾಣ ಹಾಗೂ ಫುಟ್ ಪಾತ್ ನಿರ್ಮಾಣದ 4.98 ಕೋಟಿ ರೂ. ವೆಚ್ಚದ ಕಾಮಗಾರಿಯು ಮಂದಗತಿಯಲ್ಲಿ ನಡೆಯುತ್ತಿದೆ. ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿರುವುದರಿಂದ ಶೀಘ್ರವಾಗಿ ಕಾಮಗಾರಿ ನಿರ್ವಹಿಸಲು ಇರುವ ಸಮಸ್ಯೆಗಳನ್ನು ಪರಿಹರಿಸಲು ಇಂದು ಶಾಸಕರು ಮೂಡಾ ಅಧಿಕಾರಿಗಳು, ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ, ವಾಣಿ ವಿಲಾಸ ನೀರು ಸರಬರಾಜು ಅಧಿಕಾರಿಗಳು, ನಗರಪಾಲಿಕೆ ಅಧಿಕಾರಿಗಳು, ಚೆಸ್ಕಾಂ, ಅರಣ್ಯ, ತೋಟಗಾರಿಕೆ, ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು