News Karnataka Kannada
Saturday, April 20 2024
Cricket
ಮೈಸೂರು

ವೀರನಹೊಸಳ್ಳಿಯಿಂದ ಮೈಸೂರಿಗೆ ದಸರಾ ಗಜಪಯಣ

Photo Credit :

ವೀರನಹೊಸಳ್ಳಿಯಿಂದ ಮೈಸೂರಿಗೆ ದಸರಾ ಗಜಪಯಣ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಯಲಿದ್ದು, ಈ ನಡುವೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅಭಿಮನ್ಯು ನೇತೃತ್ವದ ಆನೆಗಳ ತಂಡ ಇಂದು ಮೈಸೂರಿಗೆ ಬಂದಿಳಿಯಲಿದ್ದು, ವೀರನಹೊಸಳ್ಳಿಯಲ್ಲಿ ಪೂಜೆ ನೆರವೇರಿಸಿ ಸಾಂಪ್ರದಾಯಿಕವಾಗಿ ಕರೆತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಇಂದು ವೀರನ ಹೊಸಹಳ್ಳಿಯಿಂದ ಹೊರಟ ಗಜಪಡೆ ಮೈಸೂರಿನ ಅರಣ್ಯ ಭವನಕ್ಕೆ ಮಧ್ಯಾಹ್ನದ ವೇಳೆ ಬಂದಿಳಿಯಲಿದ್ದು, ಕ್ಯಾಪ್ಟನ್ ಅಭಿಮನ್ಯು ಟೀಂ ಸ್ವಾಗತಿಸಲು ಅರಮನೆ ನಗರಿ ಸಿದ್ಧವಾಗಿದೆ. ಗಜಪಡೆ ಸ್ವಾಗತಕ್ಕೆ ಅರಣ್ಯ ಭವನದಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದ್ದು, ಆನೆಗಳು ಅರಣ್ಯ ಭವನದಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ.

ವೀರನ ಹೊಸಹಳ್ಳಿಯಲ್ಲಿ ಗಜಪಡೆಗೆ ಬೆಳಿಗ್ಗೆ 10 ರಿಂದ 11 ರ ಒಳಗೆ ಪೂಜೆ ನೆರವೇರಿಸಲಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನತ್ತ ಗಜಪಡೆ ಪ್ರಯಾಣ ಬೆಳೆಸಿದೆ. ಪೂಜೆ ಕಾರ್ಯಕ್ರಮದಲ್ಲಿ ಕೇವಲ ಅಧಿಕಾರಿಗಳಷ್ಟೇ ಭಾಗಿಯಾಗಿದ್ದರು. ಗಜಪಯಣ ಪೂಜಾಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಭಾಗಿಯಾಗಿರಲಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು