News Karnataka Kannada
Friday, April 19 2024
Cricket
ಮೈಸೂರು

ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ಸರ್ಕಾರ ಆತುರತೆ ತೋರುವುದಿಲ್ಲ: ಸಚಿವ ಶ್ರೀರಾಮುಲು

Photo Credit :

ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ಸರ್ಕಾರ ಆತುರತೆ ತೋರುವುದಿಲ್ಲ:  ಸಚಿವ ಶ್ರೀರಾಮುಲು

ಮೈಸೂರು: ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ಸರ್ಕಾರ ಆತುರತೆ ತೋರುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮೈಸೂರಿನಲ್ಲಿಂದು ಸ್ಪಷ್ಟಪಡಿಸಿದರು.

ಮೈಸೂರು ಪ್ರವಾಸದಲ್ಲಿರುವ ಸಚಿವರು ರಾಜ್ಯದಲ್ಲಿ ಶಾಲಾ ಕಾಲೇಜುಗಳ ಆರಂಭಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಮಾತನಾಡಿ, ನನಗೆ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತ ಮುಖ್ಯವಾಗಿದೆ. ಸರ್ಕಾರ ನೇಮಿಸಿರುವ ತಜ್ಞರ ಸಮಿತಿ ನೀಡುವ ವರದಿ ಅಧರಿಸಿ ಶಾಲಾ ಕಾಲೇಜುಗಳ ಆರಂಭದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಶಾಲೆ ಆರಂಭಿಸಬೇಕೋ ಅಥವಾ ಬೇಡವೋ ಅನ್ನುವ ಬಗ್ಗೆ ಒಂದು ವಾರದಲ್ಲಿ ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಎಲ್ಲಾ ಕ್ಷೇತ್ರದ ತಜ್ಞರ ಅಭಿಪ್ರಾಯ ಪಡೆಯಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಾವ ರೀತಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಂಡರೋ ಅದೇ ಶಾಲಾ ಕಾಲೇಜು ಪ್ರಾರಂಭವಾದಾಗಲೂ ಕೂಡ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಲಹೆ ಪಡೆದಿದ್ದಾರೆ. ಸವಿಸ್ತಾರವಾಗಿ ವರದಿ ಪಡೆದ ನಂತರ ತಜ್ಞರ ಸಲಹೆಗಳನ್ನು ಪಡೆದು ಆದಷ್ಟು ಶೀಘ್ರದಲ್ಲಿ ಒಂದು ವಾರದೊಳಗೆ ಶಿಕ್ಷಣ ಇಲಾಖೆಗೆ, ಮಂತ್ರಿಗಳಾದ ಸುರೇಶ್ ಕುಮಾರ್ ಅವರಿಗೆ ನೀಡುವ ಕೆಲಸವಾಗಲಿದೆ ಎಂದರು.

ಇಡೀ ಬಾರತದಲ್ಲಿ 17ರಾಜ್ಯಗಳನ್ನು ಗುರುತಿಸಿದ್ದಾರೆ. 17ರಾಜ್ಯಗಳಲ್ಲಿ 60 ಜಿಲ್ಲೆಗಳಲ್ಲಿ ಅದರಲ್ಲಿ ನಮ್ಮ ಕರ್ನಾಟಕದಲ್ಲಿ ಕೂಡ ವಿಶೇಷವಾಗಿ ಬೆಂಗಳೂರು, ಮೈಸೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚು ಇವೆ. ಸಾವಿನ ಸಂಖ್ಯೆ ಕೂಡ ಮೈಸೂರಲ್ಲಿ ಹೆಚ್ಚುತ್ತಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಸಂಬಂಧ ದೇಶದ 16 ರಾಜ್ಯಗಳು ಹೆಚ್ಚಿನ ನಿಗಾ ವಹಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಪ್ರಧಾನಿಗಳು ಸಲಹೆ ನೀಡಿದ್ದಾರೆ. ಹಾಗಾಗಿ ಇಂದು ಮೈಸೂರು ಭಾಗದ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ದಸರಾ ಮಹೋತ್ಸವವನ್ನು ಮತ್ತಷ್ಟು ಸರಳವಾಗಿ, ಸುರಕ್ಷಿತವಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು