News Karnataka Kannada
Wednesday, April 24 2024
Cricket
ಮೈಸೂರು

ಶೀಘ್ರದಲ್ಲೇ ಕಾವೇರಿ, ಕಬಿನಿ ಜಲಾಶಯದ ಸಲಹಾ ಸಮಿತಿ ಸಭೆ

Photo Credit :

ಶೀಘ್ರದಲ್ಲೇ ಕಾವೇರಿ, ಕಬಿನಿ ಜಲಾಶಯದ ಸಲಹಾ ಸಮಿತಿ ಸಭೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಾವೇರಿ ಮತ್ತು ಕಬಿನಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಕಾವೇರಿ ಮತ್ತು ಕಬಿನಿ ಜಲಾಶಯಗಳ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆದಷ್ಟು ಬೇಗ ಕರೆಯಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಗಾರು ಹಂಗಾಮಿಗೆ ಜಿಲ್ಲಾಡಳಿತ ಮಾಡಿಕೊಂಡಿರುವ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದ ಅವರು, ನಂತರ ಮಾತನಾಡಿ ಕೆ.ಆರ್.ಎಸ್. ಜಲಾಯಶಯ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ವ್ಯಾಪ್ತಿಗೆ ಬರುತ್ತದೆ. ಅವರೊಂದಿಗೆ ಚರ್ಚಿಸಿ, ಕಬಿನಿ ಜಲಯಾಶಯದ ಸಭೆಯನ್ನು ಸಹ ನಡೆಸಲಾಗುವುದು ಎಂದರು.

ಮೆಕ್ಕೆಜೋಳ ಬೆಳೆದ ರೈತರಿಗೂ ಲಾಕ್‍ಡೌನ್ ಸಂದರ್ಭದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 5000 ರೂ.ಗಳ ಪ್ರೋತ್ಸಾಹಧನ ಘೋಷಣೆ ಮಾಡಿದೆ. ಈ ಮೊತ್ತ ಬೇಗ ರೈತರಿಗೆ ತಲುಪುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆಬೀಜ, ರಸಗೊಬ್ಬರ ಮುಂತಾದವುಗಳು ಕೊರತೆಯಾಗಬಾರದು, ಸಕಾಲಕ್ಕೆ ಬಿತ್ತನೆ ಕಾರ್ಯ ನಡೆಸಲು ಎಲ್ಲಾ ಕ್ರಮಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನೀಡುವ ಪರಿಹಾರ ಇನ್ನೂ ಕೆಲವು ಕುಟುಂಬಂಗಳಿಗೆ ಕೊಡಬೇಕಾಗಿದೆ. ತಕ್ಷಣ ಅವರಿಗೆ ಪರಿಹಾರ ಮೊತ್ತ ಸಿಗಬೇಕು ಎಂದರು.

ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಇಲ್ಲ. ಜಿಲ್ಲೆಗೆ 1,04,900 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಈಗಾಗಲೇ 98,920 ಮೆಟ್ರಿಕ್ ಟನ್ ಪೂರೈಕೆಯಾಗಿದೆ. ಈ ಪೈಕಿ 48,079 ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದ್ದು, ಇನ್ನೂ 50,841 ದಾಸ್ತಾನು ಇದೆ ಎಂದರು.

ಜಿಲ್ಲೆಗೆ ಒಟ್ಟು 91,831 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದೆ. ಹಲವಾರು ರೈತರು ತಮ್ಮಲ್ಲೇ ಇರುವ ಬಿತ್ತನೆ ಬೀಜವನ್ನು ಬಳಸುತ್ತಾರೆ. ಈ ಬಿತ್ತನೆ ಬೀಜದ ಬದಲಿ ಅನುಪಾತದ ಪ್ರಕಾರ ಪ್ರಸ್ತುತ ಬೇಡಿಕೆಯನ್ನು 37,692 ಕ್ವಿಂಟಾಲ್ ಎಂದು ಅಂದಾಜಿಸಲಾಗಿದೆ. 39,673 ಕ್ವಿಂಟಾಲ್ ದಾಸ್ತಾನು ಈಗಾಗಲೇ ಇರುವುದರಿಂದ ಯಾವುದೇ ಕೊರತೆ ಇಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು