News Karnataka Kannada
Thursday, April 25 2024
Cricket
ಮೈಸೂರು

ಶ್ರೀ ಚಾಮುಂಡೇಶ್ವರಿ ಕಾರ್ಖಾನೆ ಕಬ್ಬು ಅರೆಯುವಿಕೆ ಆರಂಭ

Photo Credit :

ಶ್ರೀ ಚಾಮುಂಡೇಶ್ವರಿ ಕಾರ್ಖಾನೆ ಕಬ್ಬು ಅರೆಯುವಿಕೆ ಆರಂಭ

ಭಾರತೀನಗರ: ಇಲ್ಲಿನ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಪ್ರಸ್ತುತ ಸಾಲಿನ ಕಬ್ಬು ಅರೆಯುವ ಕಾರ್ಯಕ್ಕೆ ಭಾನುವಾರ ಕಾರ್ಖಾನೆ ಉಪಾಧ್ಯಕ್ಷ ಮಣಿ ರೈತ ಮುಖಂಡರೊಂದಿಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಪ್ರಸ್ತುತ 2020-21 ನೇ ಸಾಲಿನ ಕಬ್ಬು ಅರೆಯುವಿಕೆ ಪ್ರಾರಂಭವಾಗಿದೆ. ರೈತರಿಂದ 10 ಲಕ್ಷ ಟನ್ ಕಬ್ಬು ಅರೆಯುವ ನಿರೀಕ್ಷೆ ಇದೆ. ಟನ್ ಕಬ್ಬಿಗೆ ಮುಂಗಡ 2700 ರೂ ಒಂದು ತಿಂಗಳೊಳಗೆ ನೀಡಲು ಸಿದ್ಧವಿದ್ದೇವೆ. ಜೊತೆಗೆ ಸರ್ಕಾರ ನಿಗಧಿ ಪಡಿಸಿರುವ ಎಫ್‍ಆರ್‍ಪಿ ದರವನ್ನು ನಂತರ ದಿನಗಳಲ್ಲಿ ನೀಡಲು ಆಡಳಿತ ಮಂಡಳಿ ಒಪ್ಪಿದೆ ಎಂದರು.

ಕಳೆದ ಸಾಲಿನ ಕಬ್ಬು ಸರಬರಾಜು ಮಾಡಿದ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದೆ ಸಕಾಲಕ್ಕೆ ಹಣ ಬಟಾವಡೆ ಮಾಡಲಾಗಿದೆ. ಹಾಗೆಯೇ ಪ್ರಸ್ತುತ ಸಾಲಿನಲ್ಲೂ ಒಂದು ತಿಂಗಳೊಳಗೆ ಹಣ ನೀಡುವುದಾಗಿ ಭರವಸೆ ನೀಡಿದರು. ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಎಫ್‍ಆರ್‍ಪಿ ದರದ ಕಳೆದ ಸಾಲಿನ ಬಾಕಿ 104.50 ರೂ.ಗಳನ್ನು ಶೀಘ್ರದಲ್ಲೇ ನೀಡುವುದಾಗಿ ಹೇಳಿದರು. ರೈತರು ಹಿಂದೆ ಹೇಗೆ ಕಾರ್ಖಾನೆಗೆ ಸಹಕಾರ ಕೊಟ್ಟಿದ್ದರೋ ಅದೇ ರೀತಿ ಮುಂದೆಯೂ ಸಹಕಾರ ನೀಡಬೇಕೆಂದು ಕೋರಿದರು.

 

ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡುವ ಮುನ್ನ ಗಣಪತಿ ಹೋಮ, ಚಾಮುಂಡೇಶ್ವರಿ ಪೂಜೆ ನಡೆಸಿ ಪೂರ್ಣಹೂತಿ ನೀಡಿದ ನಂತರ ಕಾರ್ಖಾನೆಗೆ ಚಾಲನೆ ನೀಡಿ ನೌಕರರಿಗೆ ಹಸ್ತಲಾಘನ ಮಾಡಿ ಶುಭಹಾರೈಸಿ, ತದ ನಂತರ ಪ್ರಸಾದ ವಿನಿಯೋಗ ನಡೆಯಿತು. ಈ ಸಂದರ್ಭ ಕಾರ್ಖಾನೆಗೆ ಮೊದಲು ಕಬ್ಬು ತುಂಬಿಕೊಂಡು ಬಂದಂತಹ ಎತ್ತಿನಗಾಡಿ, ಟ್ಯಾಕ್ಟರ್, ಲಾರಿಗೆ ಬಹುಮಾನ ವಿತರಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು