News Karnataka Kannada
Friday, April 12 2024
Cricket
ಮೈಸೂರು

ಸರಗಳ್ಳತನ-ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ

Photo Credit :

ಸರಗಳ್ಳತನ-ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ

ಮೈಸೂರು: ನಗರದ ವಿವಿಧೆಡೆ ಸರಗಳ್ಳತನ ಮತ್ತು ದ್ವಿಚಕ್ರವಾಹನ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹುಣಸೂರಿನ ನರಸಿಂಹಬಡಾವಣೆ ನಿವಾಸಿ ಮಹಮ್ಮದ್, ಬೆಂಗಳೂರಿನ ಕೆ.ಜಿ.ಹಳ್ಳಿ ನಿವಾಸಿ ಅರ್ಬಾಜ್ ಖಾನ್, ಬೆಂಗಳೂರು ಸದ್ದಾಂ ನಗರ ನಿವಾಸಿ ಜಿಬ್ರಾನ್ ಖಾನ್, ಹುಣಸೂರು ಶಬೀರ್ ನಗರ ನಿವಾಸಿ ಇಮ್ರಾನ್ ಖಾನ್ ಬಂಧಿತ ಆರೋಪಿಗಳು.

ನಗರದಲ್ಲಿ ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ನಿಗಾ ವಹಿಸಿದ್ದು ಅದರಂತೆ ಕೃಷ್ಣರಾಜ ಠಾಣೆ ಪೊಲೀಸರು ಚಾಮುಂಡಿ ಬೆಟ್ಟದಲ್ಲಿ ಗಸ್ತಿನಲ್ಲಿದ್ದ ವೇಳೆ  ಚಾಮುಂಡಿಬೆಟ್ಟದ ಮುಖ್ಯರಸ್ತೆಯಲ್ಲಿರುವ ಉತ್ತನಹಳ್ಳಿ ಕಡೆಗೆ ಹೋಗುವ ಜಂಕ್ಷನ್ ಬಳಿ ನಾಲ್ವರು ಒಂದು ಸ್ಪ್ಲೆಂಡರ್ ಬೈಕ್ ಮತ್ತು ಡಿಯೋ ಸ್ಕೂಟರ್‍ ನ್ನು ನಿಲ್ಲಿಸಿಕೊಂಡಿರುವುದು ಕಂಡು ಬಂದಿದೆ. ಹೀಗಾಗಿ ಸಂಶಯಗೊಂಡ ಪೊಲೀಸರು ಅವರ ಬಳಿ ತೆರಳಿದಾಗ ಪೊಲೀಸ್ ಜೀಪನ್ನು ನೋಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ಮಾಡಿದ ವೇಳೆ ಹಲವು ಪ್ರಕರಣಗಳು ಬೆಳಕಿಗೆ ಬಂದಿದೆ.

 ಆರೋಪಿಗಳು ಕೃಷ್ಣರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  4, ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿ 1,  ಕುವೆಂಪುನಗರ ಠಾಣಾ ವ್ಯಾಪ್ತಿಯಲ್ಲಿ 1 ಸರಗಳ್ಳತನಗಳನ್ನು ಮಾಡಿದ್ದು,    ಕೆ.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  4, ಬೆಂಗಳೂರಿನ  ಉಪ್ಪಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1,  ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1, ಮಹಾಲಕ್ಷ್ಮೀ ಲೇಔಟ್ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ 1 ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡ ಹಿನ್ನಲೆಯಲ್ಲಿ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ರೂ. 14,10,000 ಮೌಲ್ಯದ  214 ಗ್ರಾಂ ತೂಕದ 6 ಚಿನ್ನದ ಸರಗಳು,  7 ವಿವಿಧ ಮಾದರಿಯ ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.      

ಪ್ರಕರಣದಲ್ಲಿ ಆರೋಪಿ ಮಹಮ್ಮದ್ ಫರಾಜ್  ಪ್ರಮುಖ ಆರೋಪಿಯಾಗಿದ್ದು, ಈತನ ವಿರುದ್ದ ಮೈಸೂರು ಮತ್ತು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 50ಕ್ಕೂ ದರೋಡೆ ಮತ್ತು ಸುಲಿಗೆ ಪ್ರಕರಣಗಳು ಈತನ ಮೇಲೆ ದಾಖಲಾಗಿರುವುದು ಬೆಳಕಿಗೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು