News Karnataka Kannada
Tuesday, April 23 2024
Cricket
ಮೈಸೂರು

ಸರಳ ದಸರಾದಲ್ಲಿ ಚೀನಾ ವಸ್ತುಗಳ ಬಳಕೆ ನಿಷೇಧ

Photo Credit :

ಸರಳ ದಸರಾದಲ್ಲಿ ಚೀನಾ ವಸ್ತುಗಳ ಬಳಕೆ ನಿಷೇಧ

ಮೈಸೂರು: ಕೋವಿಡ್‌ 19 ಕಾರಣದಿಂದಾಗಿ ಈ ಬಾರಿ ರಾಜ್ಯ ಸರ್ಕಾರ ನಾಡ ಹಬ್ಬ ದಸರಾವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿರುವ ಬೆನ್ನಲ್ಲೇ ಅಧಿಕಾರಿಗಳು ಈ ಬಾರಿ ಚೀನಾದ ಯಾವುದೇ ವಸ್ತುವನ್ನು ಬಳಸಿಕೊಳ್ಳುವುದಕ್ಕೆ ನಿರ್ಬಂಧ ವಿಧಿಸಿದ್ದಾರೆ.

ದಸರಾ ಎಂದರೆ ಇಡೀ ನಗರವನ್ನು ವಿದ್ಯುತ್‌ ದೀಪಾಲಂಕಾರಗಳಿಂದ ಜಗಮಗಿಸುವ ಹಬ್ಬ. ಹೀಗಾಗಿ ದಸರಾ ಸಿದ್ಧತೆಯೂ ಜೋರಾಗಿ ನಡೆದಿದ್ದು ಅರಮನೆಯ ದೀಪಾಲಂಕಾರಕ್ಕಾಗಿ ಬಲ್ಬ್‌ಗಳ ಪರಿಶೀಲನೆ ಹಾಗೂ ಕೆಟ್ಟು ಹೋದ ಬಲ್ಬ್‌ಗಳನ್ನು ಬದಲಾಯಿಸುವ ಕೆಲಸ ಆರಂಭವಾಗಿದೆ. ಈ ಬಾರಿಯ ದಸರೆಯ ದೀಪಾಲಂಕಾರದಲ್ಲಿ ಅಗ್ಗದ ಚೈನಾದ ಬಲ್ಬ್‌ಗಳನ್ನು ಬಳಸದಿರಲು ನಿರ್ಧರಿಸಲಾಗಿದೆ.

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಚೈನಾ ಆ್ಯಪ್‍ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದ್ದು ಕೆಲ ವಸ್ತುಗಳ ಆಮದಿನ ಮೇಲೂ ನಿರ್ಬಂಧ ವಿಧಿಸಲಾಗಿದೆ. ಬದಲಿಗೆ ಆತ್ಮ ನಿರ್ಭರ ಭಾರತಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದೇ ಕಾರಣದಿಂದ ದಸರೆಯಲ್ಲಿ ಚೈನಾ ಎಲ್‌ಇಡಿ ಬಲ್ಬ್‌ಗಳನ್ನು ಬ್ಯಾನ್ ಮಾಡಲಾಗುತ್ತಿದೆ.

ಮೈಸೂರು ದಸರಾ ವೇಳೆ ರಸ್ತೆಗಳಿಗೆ , ವೃತ್ತಗಳಿಗೆ , ಅರಮನೆಗಳಿಗೆ , ದೇವಾಲಯಗಳಿಗೆ , ಪ್ರತಿಮೆಗಳಿಗೆ ದೀಪಾಲಂಕಾರ ಮಾಡಲಾಗುತ್ತದೆ. ಇದಕ್ಕಾಗಿ ಮುಂಬೈ, ದೆಹಲಿ ಮತ್ತು ಕೊಲ್ಕತ್ತಾದಿಂದ ಬಲ್ಬ್‌ಗಳು ಹಾಗೂ ವಿವಿಧ ಬಿಡಿಭಾಗಗಳನ್ನು ತರಿಸಿಕೊಳ್ಳಲಾಗುತ್ತದೆ. ಈ ಬಾರಿ ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಚೀನಾದ ಯಾವುದೇ ವಸ್ತುಗಳನ್ನು ದಸರಾ ದೀಪಾಲಂಕಾರದಲ್ಲಿ ಬಳಸದಿರಲು ನಿರ್ಧರಿಸಲಾಗಿದೆ ಎಂದು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು