News Karnataka Kannada
Saturday, April 20 2024
Cricket
ಮೈಸೂರು

ಸರಳ ನಾಡಹಬ್ಬ ದಸರಾಕ್ಕೆ ಸರ್ಕಾರ ನಿರ್ಧಾರ

Photo Credit :

 ಸರಳ ನಾಡಹಬ್ಬ ದಸರಾಕ್ಕೆ ಸರ್ಕಾರ ನಿರ್ಧಾರ

ಮೈಸೂರು: ಕೋವಿಡ್-19 ಸಾಂಕ್ರಮಿಕ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಿದೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಕೊರೊನಾ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಆಹಾರ ಮೇಳ, ಕ್ರೀಡೆ, ಯುವದಸರಾ, ಸಾಂಸ್ಕೃತಿಕ ದಸರ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು.

ಮೊದಲೆಲ್ಲ ೧೦-೧೨ ಆನೆಗಳು ಭಾಗವಹಿಸುತಿದ್ದ ಅದ್ದೂರಿ ನಾಡಹಬ್ಬದ ಆಚರಣೆಯಲ್ಲಿ ಈ ಬಾರಿ ಗಜಪಡೆಯನ್ನು ಕನಿಷ್ಟ 5 ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು.

ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸುತ್ತಿರುವ ಕೊರೋನ ವಾರಿಯರ್ಸ್‌ ಅವರಿಂದ ನರವೇರಿಸಲು ತೀರ್ಮಾನಿಸಲಾಯಿತು. ದಸರಾ ಆಚರಣೆಗೆ 10 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುವುದಲ್ಲದೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು ಮತ್ತು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು. ಅಲ್ಲದೇ ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮೈಸೂರು ಜಿಲ್ಲಾಧಿಕಾರಿ ಬಿ ಶರತ್‌ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು