News Karnataka Kannada
Sunday, April 28 2024
ಮೈಸೂರು

ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ದಕ್ಷಿಣ ವಲಯ ಐಜಿಪಿ

Photo Credit :

ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ದಕ್ಷಿಣ ವಲಯ ಐಜಿಪಿ

ಮೈಸೂರು: ಅಪಘಾತದಲ್ಲಿ ತೀವ್ರ ಗಾಯಗೊಂಡು ರಕ್ತಸ್ರಾವದಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವ್ಯಕ್ತಿಯೋರ್ವರನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ದಕ್ಷಿಣ ವಲಯ ಐಜಿಪಿ ವಿಫುಲ್ ಕುಮಾರ್ ಮಾನವೀಯತೆ ಮೆರೆದಿದ್ದಾರೆ.

ಮೈಸೂರು ತಾಲೂಕು ಆಯರಹಳ್ಳಿ ಗ್ರಾಮದ ಶಿಕ್ಷಕ ರಂಗಸ್ವಾಮಿ ಅವರು ಮೈಸೂರಿನ ಸಿದ್ದಾರ್ಥನಗರ ರಿಂಗ್ ರಸ್ತೆ ಮೂಲಕ ತಮ್ಮ ಬೈಕಿನಲ್ಲಿ ಗ್ರಾಮಕ್ಕೆ ತೆರಳುವ ವೇಳೆ ದೊಡ್ಡ ಆಲದಮರದ ಬಳಿ ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಬಿದ್ದ ರಭಸಕ್ಕೆ ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತ ಸುರಿಯಲಾರಂಭಿಸಿದೆ. ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟದಿಂದ‌ ಮೈಸೂರಿನ ಕಡೆಗೆ ಆಗಮಿಸುತ್ತಿದ್ದ ವಿಫುಲ್‌ ಕುಮಾರ್ ಅವರು ಅಪಘಾತವನ್ನು ಗಮನಿಸಿ ಕಾರನ್ನು ನಿಲ್ಲಿಸಿದ್ದಾರೆ. ಜೊತೆಗೆ ಸ್ಥಳೀಯರ ನೆರವಿನಿಂದ ತೀವ್ರ ರಕ್ತಸ್ರಾವದಿಂದ ನೋವಿನಿಂದ ನರಳಾಡುತ್ತಿದ್ದ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.

ಪೆಟ್ಟಾಗಿದ್ದ ಶಿಕ್ಷಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಐಜಿಪಿ ವಿಫುಲ್ ಕುಮಾರ್ ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದವನ‌ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಹ್ಯಾಟ್ಸಾಫ್‌ ಹೇಳುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು