Categories: ಮೈಸೂರು

ಅಭಿವ್ಯಕ್ತಿ ಹಬ್ಬ -೨೦೨೧ ಕ್ಕೆ ತೆರೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನಾಂಕ ೧೬ ರಂದು ಪ್ರಾರಂಭವಾದ  ಅಭಿವ್ಯಕ್ತಿ ಕಲಾ ಮತ್ತು ಸಾಂಸ್ಕೃತಿಕ ಕೇಂದ್ರದ ವಾರ್ಷಿಕ ಕಾರ್ಯಕ್ರಮ ಅಭಿವ್ಯಕ್ತಿ ಹಬ್ಬ ನಿನ್ನೆಯ ದಿನ ನವೋಲ್ಲಾಸ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಂಡಿತು.

ಮೊದಲ ದಿನ ನಡೆದ ನೃತ್ಯೋಲ್ಲಾಸ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ನೃತ್ಯಕಲಾವಿದೆಯರಾದ ವಿ. ಪ್ರತಿಭಾ ರಾಮಸ್ವಾಮಿ ಮತ್ತು ವಿ.ಕರುಣಸಾಗರಿ ಅವರು ಅಮೋಘವಾದ ನೃತ್ಯ ಪ್ರದರ್ಶನ ನೀಡಿ ಕಲಾರಸಿಕರ ಮನಸೂರೆಗೊಳಿಸಿದರು.

ಈ  ವೇಳೆ ಮೈಸೂರಿನ ಹಿರಿಯ ಗಮಕಿಗಳಾದ ಕೃ.ರಾಮಚಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಲಾ ಪೋಷಕ ಶ್ರೀ ಹಿಮಾಂಶು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

   

ಎರಡನೆಯ ದಿನದ ನವೋಲ್ಲಾಸ ಕಾರ್ಯಕ್ರಮದಲ್ಲಿ ಅಭಿವ್ಯಕ್ತಿಯ ವಿದ್ಯಾರ್ಥಿನಿಯರು ಮತ್ತು ಅಭಿವ್ಯಕ್ತಿಯ ನಿರ್ದೇಶಕಿ ವಿ. ಸುಹಾಸಿನಿ ಕೌಲಗಿ ಅವರು ಪ್ರದರ್ಶಿಸಿದ ಎರಡೂವರೆ ತಾಸಿನ ಕಾರ್ಯಕ್ರಮ ನೋಡುಗರ ಮನಮುಟ್ಟಿತು.

ವಿ, ಸುಹಾಸಿನಿ ಅವರು ನೃತ್ಯ ಸಂಯೋಜನೆ ಮಾಡಿದ ನರ್ತಿಸಿದ ಅಷ್ಟಪದಿಯು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು. ಮುಖ್ಯ ಅತಿಥಿಗಳಾಗಿ ಮೈಸೂರಿನ ಹಿರಿಯ ನೃತ್ಯ ಕಲಾವಿದೆ ತುಳಸಿ ರಾಮಚಂದ್ರ ಮತ್ತು ಕೊಯಮತ್ತೂರಿನ ಪ್ರಸಿದ್ಧ ನೃತ್ಯ ಕಲಾವಿದೆ ಕರುಣಸಾಗರಿ ಆಗಮಿಸಿದ್ದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago