ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಸಭೆ ಹಾಗೂ ವಿವಿಧ ಕಾರ್ಯ ಕ್ರಮಗಳಲ್ಲಿ ಪಾಲ್ಗೊಳ್ಳಲಿ ದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಬರಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. 11.15ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳ ಜತೆ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನದ ಬಳಿಕ ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಅಲ್ಲಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.