News Karnataka Kannada
Monday, April 29 2024
ಮೈಸೂರು

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ ಮಕ್ಕಳನ್ನು ಸಾವಿನ ಕೂಪಕ್ಕೆ ತಳ್ಳುತ್ತಿರುವ ಸರ್ಕಾರ: ಮಾಜಿ ಶಿಕ್ಷಣ ಸಚಿವ ಎಚ್‌.ವಿಶ್ವನಾಥ್‌

H.vishwanath Mysore 30 6 21
Photo Credit :

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಿರುವ ಸರ್ಕಾರದ ನಿರ್ಧಾರ ಸರಿಯಲ್ಲ. ಸರ್ಕಾರದ ನಿರ್ಧಾರದಿಂದ ಮಕ್ಕಳನ್ನು ಸಾವಿನ ಕೂಪಕ್ಕೆ ತಳ್ಳಲಾಗುತ್ತಿದೆ ಎಂದು ಮಾಜಿ ಶಿಕ್ಷಣ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಕಿಡಿಕಾರಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ‌ ಸಂಧರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾಗಿರಲಿಲ್ಲ. ಸರ್ಕಾರ ಹಾಗೂ ಸಚಿವರು ಇಗೋ ಬಿಟ್ಟು ಕೆಲಸ ಮಾಡಬೇಕಿದೆ. ಮಗುವನ್ನು ಮರೆತ ಸರ್ಕಾರ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು. 10-15 ದಿನದಲ್ಲಿ ಮೂರನೇ ಅಲೆ ಪ್ರಾರಂಭವಾಗುತ್ತದೆ ಎನ್ನಲಾಗುತ್ತಿದೆ. ಆದರೆ, ಈ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ತಜ್ಞರ ಸಲಹೆ ಪಡೆದಿಲ್ಲ, ಹಿಂದೆ ಶಿಕ್ಷಣ ಇಲಾಖೆಯಲ್ಲಿ ಸಚಿವರಾಗಿ ಕೆಲಸ ಮಾಡಿದವರ ಸಲಹೆ ಪಡೆದಿಲ್ಲ. ಏಕಾಏಕಿ ನಿರ್ಧಾರ ತೆಗೆದುಕೊಂಡು ಮಕ್ಕಳನ್ನು ಸಾವಿನ ಕೂಪಕ್ಕೆ ತಳ್ಳಲಾಗುತ್ತಿದೆ ಎಂದು ಪರೀಕ್ಷೆ ನಡೆಸುವುದನ್ನು ವಿರೋಧಿಸಿದರು.
ಇಡೀ ಜಗತ್ತೆ ಕೊರೊನಾ ಸವಾಲನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ಮಾಡುವುದು ಅವೈಜ್ಞಾನಿಕ. ಕೇಂದ್ರ ಸರ್ಕಾರ ಸಿಬಿಎಸ್‌ಸಿ ಪರೀಕ್ಷೆಯನ್ನೇ ರದ್ದು ಮಾಡಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಬೇಡ. ಯಾವ ಪುರುಷಾರ್ಥಕ್ಕೆ ಪರೀಕ್ಷೆ ಮಾಡಲಾಗುತ್ತಿದೆ? ಜೀವ ಮತ್ತು ಜೀವನ ಎರಡನ್ನು ತೆಗೆಯಲು ಸುರೇಶ್ ಕುಮಾರ್ ಮುಂದಾಗಿದ್ದಾರೆ. ಪ್ರಧಾನಿಯವರೇ, ಜೀವ ಮುಖ್ಯ ನಂತರ ಜೀವನ ಅಂತ ಹೇಳಿದ್ದಾರೆ. ಆದರೆ, ಸಚಿವ ಸುರೇಶ್ ಕುಮಾರ್ ನನಗೆ ಎಲ್ಲ ಗೊತ್ತು ಎಂಬ ಇಗೋ ಇದೆ. ಇಂತಹ ಇಗೋ ಇರಬಾರದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು