Categories: ಮೈಸೂರು

ಎಸ್ ಐಟಿ ತನಿಖೆ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ: ಸಿದ್ದರಾಮಯ್ಯ

ಮೈಸೂರು: ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಸಿಬಿಐ ಸಾಕ್ಷ್ಯಾಧಾರದ ಕೊರೆತೆ ಹಿನ್ನೆಲೆಯಲ್ಲಿ ಕೈ ಬಿಟ್ಟಿತ್ತು. ಇದರಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್ ಐಟಿಗೆ ವಹಿಸಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನ ಸುತ್ತೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ಸುತ್ತೂರು ಜಾತ್ರಾಮಹೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಎಸ್ ಐಟಿಗೆ ಹಸ್ತಾಂತರ ವಿಚಾರದಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ಈ ಪ್ರಕರಣವನ್ನು ಸಿಬಿಐ ಸಾಕ್ಷ್ಯಾಧಾರಗಳ ನೆಪವೊಡ್ಡಿ ತನಿಖೆ ಕೈಬಿಟ್ಟಿತ್ತು. ಆದರೆ ಪ್ರಾಥಮಿಕ ವರದಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ಆಧಾರಿಸಿ ತನಿಖೆಯನ್ನು ಎಸ್ ಐಟಿಗೆ ವಹಿಸಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದರು.

ಕೇಂದ್ರ ಸರ್ಕಾರ ಸಿಬಿಐ ದುರ್ಬಳಕೆ ಮಾಡಿಕೊಂಡು ರೆಡ್ಡಿ ಸಹೋದರರನ್ನು ಹಗರಣದಿಂದ ಪಾರು ಮಾಡುವ ಉದ್ದೇಶದಿಂದ ಈ ಪ್ರಕರಣವನ್ನು ಕೈಬಿಟ್ಟಿರುವ ಸಾಧ್ಯತೆ ಇತ್ತೇನೂ ಎಂದು ಅನುಮಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಯುಪಿಐ ಸರ್ಕಾರ ಇದ್ದಾಗ ಸಿಬಿಐನ್ನು ರಾಜ್ಯ ಬಿಜೆಪಿ ನಾಯಕರು ಚೋರ್ ಭಾಚಾವೋ ಸಂಸ್ಥೆ ಎನ್ನುತ್ತಿದ್ದರು. ಆದರೆ ಈಗ ಅದೇ ನಾಯಕರಿಗೆ ಸಿಬಿಐ ಮೇಲೆ ದಿಢೀರ್ ವ್ಯಾಮೋಹ ಬಂದಿದೆ ಎಂದು ವ್ಯಂಗ್ಯವಾಡಿದರು. ಸಿಬಿಐ ಕಾನೂನಾತ್ಮಕ ತನಿಖೆ ಮಾಡದ ಕಾರಣ ರಾಜ್ಯ ಸರ್ಕಾರ ಈ ತನಿಖೆಯನ್ನು ಎಸ್ ಐಟಿಗೆ ವಹಿಸಿದೆ ಎಂದರು.

Desk

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

15 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

40 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago