Categories: ಮೈಸೂರು

ಏವರೆಸ್ಟ್ ಏರಿದ ಕನ್ನಡಿಗನ ಸಾಧನೆ ಶ್ಲಾಘಿಸಿದ ಸಿಎಂ

ಬೆಂಗಳೂರು: ಮೌಂಟ್ ಏವರೆಸ್ಟ್ ಏರುವ ಮೂಲಕ ಕನ್ನಡದ ಪತಾಕೆ ಹಾರಿಸಿ ಬಂದ ವಿಕ್ರಮ್ ಅವರ ಸಾಧನೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದ್ದಾರೆ.

ಅರಣ್ಯ ಇಲಾಖೆಯ ಹುಣಸೂರಿನ ವೀರನಹೊಸಹಳ್ಳಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಕ್ರಮ್ ಇತ್ತೀಚೆಗೆ ಮೌಂಟ್ ಏವರೆಸ್ಟ್ ಏರುವ ಮೂಲಕ ಏವರೆಸ್ಟ್ ಏರಿದ ಪ್ರಥಮ ಕನ್ನಡಿಗ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಇವರನ್ನು ಹುಣಸೂರು ಶಾಸಕ ಹೆಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಳಿಗೆ ಕರೆದೊಯ್ದಿದ್ದು, ಈ ವೇಳೆ ಅವರೊಂದಿಗೆ ಉಭಯಕುಶಲೋಪರಿ ವಿಚಾರಿಸಿದ ಸಿಎಂ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದು, ಹುದ್ದೆಯಲ್ಲಿ ಮುಂಭಡ್ತಿ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಶಾಸಕ ಹೆಚ್.ವಿಶ್ವನಾಥ್ ಅವರು ವಿಕ್ರಮ್ ಅವರ ಮುಂದಿನ ಸಾಧನೆಗೆ ಪ್ರೋತ್ಸಾಹ ಮತ್ತು ಸಹಾಯ ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago