News Karnataka Kannada
Thursday, May 09 2024
ಮೈಸೂರು

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌

Photo Credit :

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌

ಮೈಸೂರು: ಕಟ್ಟಡ ಕಾರ್ಮಿಕರಿಗೆ ರಾಜ್ಯವ್ಯಾಪಿ ಸಂಚರಿಸಲು ಉಚಿತವಾಗಿ ಬಸ್‌ ಪಾಸ್ ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ತಿಳಿಸಿದರು.

ಸೋಮವಾರ ಮೈಸೂರು ನಗರ ಹಾಗೂ ಗ್ರಾಮಾಂತರ ವಿಭಾಗದ ಕೆಎಸ್‌ಆರ್‌ಟಿಸಿ ವಿಭಾಗದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ 60,600 ಕಟ್ಟಡ ಕರ್ಮಿಕರಿಗೆ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ನಂತರದ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಪ್ರತಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ ಇದನ್ನು ರಾಜ್ಯಾದ್ಯಂತ ವಿಸ್ತರಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ಲಾಕ್‌ಡೌನ್‌ನಿಂದಾಗಿ ಮೈಸೂರು ವಿಭಾಗಕ್ಕೆ 70 ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆ ರಾಜ್ಯದಲ್ಲಿ 1,600 ಕೋಟಿ ರೂ. ನಷ್ಟವಾಗಿದೆ. ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅಗತ್ಯತೆ ಅನುಸಾರವಾಗಿ ಮೈಸೂರು ಗ್ರಾಮಾಂತರ ಭಾಗದಿಂದ 70 ಹಾಗೂ ನಗರ ವಿಭಾಗದಿಂದ 20 ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಕಲ್ಪಿಸಲಾಗುವುದು. ಲಾಭದ ಹಿತಾಸಕ್ತಿಗಿಂತ ಮುಖ್ಯವಾಗಿ ಸಾರ್ವಜನಿಕರ ಸೇವೆ ಅಗತ್ಯವಾಗಿದೆ ಎಂದು ಹೇಳಿದರು.

ಕೋವಿಡ್-19ನಿಂದ ತತ್ತರಿಸಿ ಹೋಗಿದ್ದ ಕೂಲಿ ಕಾರ್ಮಿಕರಿಗೆ ನೆರವಾಗಲೆಂದು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ಇದರಿಂದ ಜಿಲ್ಲೆಯಿಂದ ಜಿಲ್ಲೆಗೆ ಕೂಲಿ ಕಾರ್ಮಿಕರು ಪ್ರಯಾಣ ಬೆಳಸಿ ತಮ್ಮ ಕೆಲಸ ಕಾರ್ಯಗಳಿಗೆ ಉಚಿತವಾಗಿ ತೆರಳಲು ಸಹಕಾರಿಯಾಗಲಿದೆ. ಮೈಸೂರು ಜಿಲ್ಲೆಯ ಗ್ರಾಮಾಂತರ ಹಾಗೂ ನಗರ ವಿಭಾಗಗಳನ್ನು ಒಂದುಗೂಡಿಸಲಾಗುವುದು. ಖಾಸಗಿ ಬಸ್‌ಗಳು ಹೆಚ್ಚಾಗಿ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇದರ ನಿಯಂತ್ರಣಕ್ಕೆ ಮುಂದಾಗುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು