ಮೈಸೂರು

ಕಾಂಗ್ರೆಸ್ ಕಾರಣದಿಂದಾಗಿ ಮೈಸೂರು ಸ್ಮಾರ್ಟ್ ಸಿಟಿ ವಿಳಂಬ: ಸಂಸದ ಸಿಂಹ

ಮೈಸೂರು: ಮೋದಿ ಸರ್ಕಾರದ ಆರಂಭದಲ್ಲೇ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಿತ್ತು. ಆಗಲೇ ಮೈಸೂರು ಕೂಡ ಸ್ಮಾರ್ಟ್ ಸಿಟಿ ಯೋಜನೆಗೆ ಸೇರಬೇಕಿತ್ತು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಇದ್ದಾಗ ಸ್ಥಳೀಯವಾಗಿ ನರ್ಮ್ ಹಣ ಬಳಕೆ ಮಾಡಿಕೊಂಡಿರಲಿಲ್ಲ. ಪರಿಣಾಮ ಸ್ಮಾರ್ಟ್ ಸಿಟಿ ಯೋಜನೆ ಮೈಸೂರಿನ ಕೈ ತಪ್ಪಿತು. ಆದರೆ ಈಗ ಮತ್ತೊಮ್ಮೆ ಸಂಸತ್ ಅಧಿವೇಶನದಲ್ಲಿ ಮಾತನಾಡಿದ್ದೇನೆ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆದಿದೆ. ಶೀಘ್ರದಲ್ಲೇ ಸ್ಮಾರ್ಟ್ ಸಿಟಿ ಯೋಜನೆ ಮೈಸೂರಿಗೂ ಲಭ್ಯವಾಗಲಿದೆ ಎಂದು ಹೇಳಿದ್ರು.

ಅಲ್ಲದೇ ಕೇಂದ್ರದಿಂದ ರಾಜ್ಯದ ಪಾಲಿನ ಹಣ ಬರುತ್ತಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕಿಡಿಕಾರಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯಗೆ ಎಲ್ಲಾ ಗೊತ್ತಿದ್ದೂ ರಾಜಕೀಯಕ್ಕಾಗಿ ಮಾತನಾಡುತ್ತಾರೆ. ಹಾಗಾಗಿ ಆ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ.
ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿರುವವರು. ಅವರಿಗೆ ಎಲ್ಲವೂ ಗೊತ್ತು. ಹೈವೆ ಕೆಲಸಕ್ಕೆ 95 ಸಾವಿರ ಕೋಟಿ ಹಣ ಕೊಟ್ಟಿರುವುದು ಮೋದಿ ಸರ್ಕಾರ. ಬೆಂಗಳೂರು ಮೈಸೂರು ಹೈವೆ ಅಭಿವೃದ್ಧಿಗಾಗಿ 8,096 ಕೋಟಿ ಹಣ ಕೊಟ್ಟಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡುತ್ತಿರುವುದು ಮೋದಿ ಸರ್ಕಾರ ಎಂದ ಅವರು, ರಾಜ್ಯಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಾ ಬಂದಿದೆ.
ಸಿದ್ದರಾಮಯ್ಯ ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುವುದನ್ನು ಬಿಡಬೇಕು ಎಂದರು.

ಅಲ್ಲದೇ, ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರದ ಬಳಿ ರಾಜ್ಯದ ಪಾಲು ಕೇಳಲಾರರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ಬಸವರಾಜ ಬೊಮ್ಮಾಯಿ ಅವರು ಮನೆಯಲ್ಲಿದ್ದುಕೊಂಡೇ ಅಧಿಕಾರ ನಡೆಸುವುದನ್ನು ಕಂಡಿದ್ದಾರೆ. ಅವರ ತಂದೆ ಸಹ ಮುಖ್ಯಮಂತ್ರಿ ಆಗಿದ್ದವರು. ಸ್ವತಃ ಬಸವರಾಜ ಬೊಮ್ಮಾಯಿ ಚಾಣಾಕ್ಷ ರಾಜಕಾರಣಿ. ಗೃಹ ಸಚಿವರಾಗಿ ಅವರು ಉತ್ತಮ ಕೆಲಸ ಮಾಡಿದ್ದಾರೆ. ಅವರು ಎಲ್ಲವನ್ನೂ ಚೆನ್ನಾಗಿ ನಡೆಸಿಕೊಂಡು ಹೋಗಲಿದ್ದಾರೆ ಎಂದರು.

ಇನ್ನು ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅಣ್ಣಾಮಲೈ ಅಲ್ಲಿನ ರಾಜಕೀಯಕ್ಕಾಗಿ ಅವರು ಉಪವಾಸ ಮಾಡ್ತಿದ್ದಾರೆ. ಅದರ ಬಗ್ಗೆ ನಮ್ಮಲ್ಲಿ ಹೆಚ್ಚು ಚರ್ಚೆ ಬೇಡ ಅಂದ್ರು. ನಮ್ಮ ರಾಜಕಾರಣಿಗಳು ಹೇಳಿಕೆ ಕೊಡುವುದನ್ನ ಬಿಟ್ಟು ಡಿಪಿಆರ್ ರೆಡಿ ಮಾಡಲು ಒತ್ತು ನೀಡಬೇಕು ಎಂದು ಸಲಹೆ ನೀಡಿದ್ದಾರೆ.

Desk

Recent Posts

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

2 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

14 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

17 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

24 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

28 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

35 mins ago