ಕೋವಿಡ್‌ ಲಸಿಕೆ ಪಡೆಯದ ಸೆಸ್ಕ್‌ ಅಧಿಕಾರಿಗಳು, ಸಿಬ್ಬಂದಿ ವೇತನ ಕಡಿತ

ಮೈಸೂರು: ಸರ್ಕಾರದಿಂದ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದರೂ, ಲಸಿಕೆ ಹಾಕಿಸಿಕೊಳ್ಳದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧಿಕಾರಿ/ನೌಕರರು ಹಾಗೂ ಹೊರಗುತ್ತಿಗೆ ಸಿಬ್ಬಂದಿ ವೇತನವನ್ನು ತಡೆಹಿಡಿಯಲಾಗುವುದು ಎಂದು ನಿಗಮ ಎಚ್ಚರಿಸಿದೆ.
ಮೈಸೂರು ವೃತ್ತ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 400ಕ್ಕೂ ಹೆಚ್ಚು ಅಧಿಕಾರಿ/ನೌಕರರು ಹಾಗೂ ಹೊರಗುತ್ತಿಗೆ ಸಿಬ್ಬಂದಿ ಕೋವಿಡ್‌ ಲಸಿಕೆಯನ್ನು ಪಡೆಯದಿರುವ ಬಗ್ಗೆ ಮಾಹಿತಿ ಇದೆ. ಕೋವಿಡ್‌ ದೃಢಪಟ್ಟವರು ಹಾಗೂ ಸೋಂಕಿನಿಂದ ಚೇತರಿಸಿರಿಕೊಳ್ಳುತ್ತಿರುವವರನ್ನು ಹೊರತುಪಡಿಸಿ, ಈವರೆಗೆ ಲಸಿಕೆ ಪಡೆಯದವರು ಮೊದಲ ಡೋಸ್‌ ಪಡೆದು ನಂತರ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದೆ. ಇಲ್ಲದಿದ್ದರೆ ನಿಗಮ ಕಚೇರಿಯ ಮೌಖಿಕ ಸೂಚನೆಯಂತೆ ಸಿಬ್ಬಂದಿ ವೇತನವನ್ನು ತಡೆಹಿಡಿಯುವ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

Indresh KC

Recent Posts

ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ…

12 mins ago

ಹುಟ್ಟೂರು ಕೆರಾಡಿಯಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ

ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ ‘ಕಾಂತಾರ’ ಪಾರ್ಟ್‌ 1 ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ…

24 mins ago

ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

26 mins ago

ಲೋಕಸಭಾ ಚುನಾವಣೆ: ಹುಬ್ಬಳ್ಳಿ, ಧಾರವಾಡದಲ್ಲಿ ಬಿರುಸಿನ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ…

36 mins ago

ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ: ಪ್ರಧಾನಿ ಮೋದಿ

ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ…

50 mins ago

ಮಂಗಳೂರು: ಹಿರಿಯ ನಿವಾಸಿಗಳಿಗೆ ಶ್ರವಣ ದೋಷ ನಿವಾರಕ ಯಂತ್ರೋಪಕರಣ ವಿತರಣೆ

ಲಿಟ್ಸ್ ಸಿಸ್ಟರ್ಸ್ ಆಫ್ ದಿ ಪೂವರ್ ಹಾಗೂ ಹೋಮ್ ಫಾರ್ ದಿ ಏಜೆಡ್ ಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ನಿವಾಸಿಗಳಿಗಾಗಿ “ಶ್ರವಣ…

1 hour ago