News Karnataka Kannada
Tuesday, April 30 2024
ಮೈಸೂರು

ಗ್ಯಾಂಗ್‌ ರೇಪ್‌– ಐದು ಆರೋಪಿಗಳ ಬಂಧನ: ಪ್ರವೀಣ್ ಸೂದ್

Praveen Sood 28082021
Photo Credit :

ಮೈಸೂರು: ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

‘ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ತಮಿಳುನಾಡಿನ ತಿರ್ಪುರ್ ಮೂಲದವರಾಗಿದ್ದು ಕೂಲಿ ಕಾರ್ಮಿಕರು ಹಾಗೂ ಬಹುತೇಕ ಅನಕ್ಷರಸ್ಥರಾಗಿದ್ದಾರೆ. ಚಾಲಕ, ಕಾರ್ಪೆಂಟರ್, ಕೂಲಿ ಕೆಲಸ ಮಾಡುತ್ತಿದ್ದರು. ಮೈಸೂರಿಗೆ ತರಕಾರಿ ತೆಗೆದುಕೊಂಡು ಆಗಾಗ ಬರುತ್ತಿದ್ದರು. ಅವರಿಂದ ಈ ಕುಕೃತ್ಯ ನಡೆದಿದ್ದು ಅದರಲ್ಲಿ 17 ವರ್ಷದ ಒಬ್ಬ ಬಾಲ ಆರೋಪಿ ಕೂಡ ಇದ್ದಾನೆ’ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹೆಚ್ಚಿನ ವಿವರ ನೀಡಲು ಈ ಸಂದರ್ಭದಲ್ಲಿ ಸಾಧ್ಯವಿಲ್ಲ. ಮೈಸೂರಿಗೆ ಆಗಾಗ ಬರುತ್ತಿದ್ದ ಈ ಆರೋಪಿಗಳು ಬಂದು ಹೋಗುವಾಗ ಮದ್ಯಪಾನ ಮಾಡಿಕೊಂಡು ಪಾರ್ಟಿ ಮಾಡಿಕೊಂಡು ಹೋಗುತ್ತಿದ್ದರು. ಆಗಸ್ಟ್ 24ರಂದು ಅತ್ಯಾಚಾರದಂತಹ ಹೀನಕೃತ್ಯ ನಡೆಸಿದ್ದಾರೆ ಎಂದು ತಿಳಿಸಿದರು.

ಸಾಮೂಹಿಕ ಅತ್ಯಾಚಾರದಲ್ಲಿ 6 ಮಂದಿ ಭಾಗಿಯಾಗಿದ್ದು ಒಬ್ಬ ತಲೆಮರೆಸಿಕೊಂಡಿದ್ದಾನೆ, ಆತನ ಶೀಘ್ರ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು