News Karnataka Kannada
Sunday, May 19 2024
ಮೈಸೂರು

ಚಾಮರಾಜನಗರದಲ್ಲಿ ಸಾಲಬಾಧೆಗೆ ರೈತ ಬಲಿ

Photo Credit :

ಚಾಮರಾಜನಗರದಲ್ಲಿ ಸಾಲಬಾಧೆಗೆ ರೈತ ಬಲಿ

ಚಾಮರಾಜನಗರ: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ. ಅದರಲ್ಲೂ ಹಳೆ ಮೈಸೂರು ವ್ಯಾಪ್ತಿಯಲ್ಲಿ ಮೇಲಿಂದ ಮೇಲೆ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇರುವುದು ಆತಂಕಕ್ಕೀಡು ಮಾಡಿದೆ.

ರೈತರ ಸಾಲ ಮನ್ನಾ ಮಾಡಿರುವುದಾಗಿ ಘೋಷಣೆಯಾದರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದೇಕೆ ಎಂಬುದೇ ಅರ್ಥವಾಗುತ್ತಿಲ್ಲ. ಇದೀಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ತೇರಂಬಳ್ಳಿ ಗ್ರಾಮದಲ್ಲಿ ಕೃಷಿಗಾಗಿ ಬ್ಯಾಂಕ್ ಹಾಗೂ ಕೈಸಾಲ ಮಾಡಿಕೊಂಡಿದ್ದ ರೈತನೊಬ್ಬ ಸಾಲ ಮರುಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಲೋಕೇಶ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಬೆಳೆ ಬೆಳೆಯುವ ಸಲುವಾಗಿ ಸಾಲ ಮಾಡಿಕೊಂಡಿದ್ದನು ಎನ್ನಲಾಗಿದೆ. ಕಳೆದ ಕೆಲವು ವರ್ಷಗಳಿಂದ ಈ ವ್ಯಾಪ್ತಿಯಲ್ಲಿ ಬರ ಕಾಣಿಸಿಕೊಂಡಿತ್ತು. ಹೀಗಾಗಿ ಯಾವುದೇ ಫಸಲು ಇವರ ಕೈಹಿಡಿದಿರಲಿಲ್ಲ. ಆದರೆ ಒಂದು ಕಡೆ ಮಾಡಿರುವ ಸಾಲವನ್ನು ತೀರಿಸಲು ಮತ್ತೊಂದು ಕಡೆ ಸಾಲ ಮಾಡುತ್ತಾ ಹೋಗಿದ್ದು, ಬ್ಯಾಂಕ್‍ನಲ್ಲಿ 5ಲಕ್ಷ ಹಾಗೂ ಕೈಸಾಲವೂ ಮಾಡಿಕೊಂಡಿದ್ದನು ಎನ್ನಲಾಗಿದೆ.

ಈ ನಡುವೆ ಸಾಲ ನೀಡಿದವರು ಮರಳಿ ಪಾವತಿಸುವಂತೆ ಒತ್ತಾಯಿಸುತ್ತಿದ್ದರಿಂದ ಬೇಸತ್ತ ರೈತ ಲೋಕೇಶ್ ತೇರಂಬಳ್ಳಿ ಗ್ರಾಮದಲ್ಲಿರುವ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು