ಮೈಸೂರು

ಚಾಮುಂಡಿ ಬೆಟ್ಟದ ಒಂದು ಭಾಗದಲ್ಲಿ ಭೂಕುಸಿತ, ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಸಚಿವ ಸಿ.ಸಿ.ಪಾಟೀಲ ಸೂಚನೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ಒಂದು ಭಾಗದಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಹಾನಿಗೀಡಾಗಿರುವುದರಿಂದ ಅಲ್ಲಿ ಉಂಟಾಗಬಹುದಾದ ಅಪಾಯವನ್ನು ತಪ್ಪಿಸಬೇಕು ಮತ್ತು ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟು ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ನಾನು ಸೂಚಿಸಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ತಿಳಿಸಿದ್ದಾರೆ.

ಇತ್ತೀಚೆಗೆ ಸುರಿಯುತ್ತಿರುವ ಭಾರೀ ಪ್ರಮಾಣದ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಈ ಭೂಕುಸಿತ ಸಂಭವಿಸಿದೆ. ಈ ಬಗ್ಗೆ ತಾಂತ್ರಿಕ ವರದಿಯನ್ನು ನೀಡುವಂತೆ ಸಂಬoಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ.

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಲೀ ಅಥವಾ ಹೆಚ್ಚಿನ ಆಸ್ತಿಪಾಸ್ತಿಯಾಗಲೀ ಹಾನಿಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಆದರೆ ಅಲ್ಲಿ ಮುಂದೆ ಹೆಚ್ಚಿನ ಅವಘಡಗಳಾಗಬಾರದು ಎಂಬ ಮುನ್ನೆಚ್ಚರಿಕೆಯಿಂದ ಅಲ್ಲಿಯ ಬೃಹತ್ ನಂದಿ ಪ್ರತಿಮೆಗೆ ತೆರಳುವ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. (ಪ್ರಸ್ತುತ ಚಾಮುಂಡಿ ಬೆಟ್ಟಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ಇದರಿಂದ ಯಾವುದೇ ತೊಂದರೆ ಇರುವುದಿಲ್ಲ) ಆದ್ದರಿಂದ ದಯವಿಟ್ಟು ಆ ಭಾಗಕ್ಕೆ ತೆರಳುವ ಪ್ರವಾಸಿಗರು ಇದನ್ನು ಗಮನಿಸಿ ಸೂಕ್ತ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಮೈಸೂರಿನ ಜಿಲ್ಲಾ ಆಡಳಿತದ ಸೂಕ್ತ ಸಹಕಾರವನ್ನು ಪಡೆದುಕೊಂಡು ಆದ್ಯತೆಯ ಮೇರೆಗೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago