Categories: ಮೈಸೂರು

ಚಾಮುಂಡಿ ಬೆಟ್ಟದ ತಾಯಿಗೆ ನಮೋ ಎಂದ ಭಕ್ತರು!

ಮೈಸೂರು: ಆಷಾಢದಲ್ಲಿ ಅದರಲ್ಲೂ ಶುಕ್ರವಾರ ಮತ್ತು ಮಂಗಳವಾರ ಚಾಮುಂಡಿಬೆಟ್ಟದ ಮೆಟ್ಟಿಲೇರಿ ತಾಯಿ ಚಾಮುಂಡೇಶ್ವರಿಯನ್ನು ದರ್ಶನ ಮಾಡುವುದೇ ಪರಮ ಪುಣ್ಯವಾಗಿರುವುದರಿಂದ ಭಕ್ತ ಸಾಗರವೇ ದೇಗುಲದತ್ತ ಹರಿದು ಬರುತ್ತಿದ್ದು ಬೆಟ್ಟದ ತಾಯಿ ಮುಂದೆ ತಲೆಬಾಗಿ ನಮೋ ಎನ್ನುತ್ತಿದ್ದಾರೆ.

ಕೊರೊನಾ ಕಾರಣದಿಂದ ಆಷಾಢದಲ್ಲಿ ಶುಕ್ರವಾರದಿಂದ ಭಾನುವಾರದ ವರೆಗೆ ಚಾಮುಂಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಿರುವುದರಿಂದ ಸೋಮವಾರದಿಂದ ಗುರುವಾರದ ತನಕವೂ ಭಕ್ತರು ಆಗಮಿಸುತ್ತಿದ್ದು, ಆಷಾಢದ ಕಡೇ ಮಂಗಳವಾರ ವಾದ ಇಂದು ಇತರೆ ದಿನಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಬೆಳಿಗ್ಗೆ 5.30ರಿಂದಲೇ ದೇವಸ್ಥಾನದ ಬಳಿ ಸರತಿ ಸಾಲಿನಲ್ಲಿ ಕಾದು ನಿಂತಿದ್ದ ದೃಶ್ಯ ಕಂಡು ಬಂದಿತು.

ಮುಂಜಾನೆಯೇ ಸ್ನಾನಾದಿಗಳನ್ನು ಮಾಡಿ ಮಡಿಯನ್ನುಟ್ಟು ಬಂದ ಮಹಿಳೆಯರು, ಪುರುಷರು, ಮಕ್ಕಳು, ಪಾದದಲ್ಲಿ ಪೂಜೆ ಮಾಡಿ ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ ಪ್ರತಿ ಮೆಟ್ಟಿಲಿಗೆ ಕುಂಕುಮ, ಅರಸಿನವನ್ನಿಟ್ಟರೆ, ಮತ್ತೆ ಕೆಲವರು, ಹೂವು, ಕರ್ಪೂರ ಹಚ್ಚುತ್ತಾ ಮೆಟ್ಟಿಲೇರಿದರು, ಇನ್ನು ಕೆಲವು ಭಕ್ತರು ಮಂಡಿಯಲ್ಲೇ ಮೆಟ್ಟಿಲೇರಿ ಹರಕೆ ತೀರಿಸಿದರು.

ದೇವಸ್ಥಾನದಲ್ಲಿ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಸಾಮಾನ್ಯವಾಗಿ ಆಷಾಢದ ಶುಕ್ರವಾರ ಚಾಮುಂಡೇಶ್ವರಿಯನ್ನು ದರ್ಶನ ಪಡೆಯುವುದು ಹಿಂದಿನಿಂದಲೂ ನಡೆದು ಬಂದಿದೆ. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಇನ್ನಿಲ್ಲದಂತೆ ಕಾಡುತ್ತಿರುವುದರಿಂದ ಆಷಾಢ ಶುಕ್ರವಾರ ಸೇರಿದಂತೆ ವಾರಾಂತ್ಯದ ದಿನಗಳಲ್ಲಿ ಚಾಮುಂಡಿಬೆಟ್ಟಕ್ಕೆ ಪ್ರವೇಶವನ್ನು ನಿರ್ಬಂಧಿಸುತ್ತಾ ಬರಲಾಗುತ್ತಿದೆ. ಹೀಗಾಗಿ ಶುಕ್ರವಾರ ದೇಗುಲಕ್ಕೆ ತೆರಳಲು ಸಾಧ್ಯವಾಗದ ಭಕ್ತರು ಇತರೆ ದಿನಗಳಲ್ಲಿ ಅದರಲ್ಲೂ ಮಂಗಳವಾರ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಬರುತ್ತಿದ್ದಾರೆ.

ಆಷಾಢ ಮಾಸ ಆ.8 ಭಾನುವಾರಕ್ಕೆ ಕೊನೆಯಾಗುತ್ತಿರುವುರಿಂದ ಜತೆಗೆ ಶುಕ್ರವಾರದಿಂದ ಭಾನುವಾರದ ತನಕ ಪ್ರವೇಶ ನಿಷೇಧಿಸಿರುವುದರಿಂದ ಆಷಾಢದಲ್ಲಿ ಚಾಮುಂಡೇಶ್ವರಿಯನ್ನು ದರ್ಶನ ಮಾಡಲು ಭಕ್ತರಿಗೆ ಇನ್ನು ಎರಡು ದಿನ ಮಾತ್ರ ಬಾಕಿಯಿದೆ. ಹೀಗಾಗಿ ಸಹಜವಾಗಿಯೇ ಚಾಮುಂಡಿಬೆಟ್ಟದಲ್ಲಿ ಭಕ್ತರು ಸಂಖ್ಯೆ ಹೆಚ್ಚಾಗಿದೆ.

Sampriya YK

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

16 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

17 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

21 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

31 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

37 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

52 mins ago