News Karnataka Kannada
Monday, April 29 2024
ಮೈಸೂರು

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್‌ ಪ್ರಸಾದ್‌

Srinivas Prasad
Photo Credit :

 

ಮೈಸೂರು: ಮುಂದೆ ನಾನು ಚುನಾವಣೆಗಳಲ್ಲಿ ಸ್ಪರ್ಧಿಸದಿರಲು ಚಾಮರಾಜನಗರ ಸಂಸದ ವಿ ಶ್ರೀನಿವಾಸ್‌ ಪ್ರಸಾದ್‌ ನಿರ್ಧರಿಸಿದ್ದು ಇನ್ನು ಚುನಾವಣೆಗಳಲ್ಲಿ ಸ್ಪರ್ದಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಹೇಳಿದರು.
75ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶುಕ್ರವಾರ ಶ್ರೀನಿವಾಸ್‌ ಪ್ರಸಾದ್‌ರ 50 ವರ್ಷದ ರಾಜಕೀಯ ಜೀವನ ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ. ಈ ವೇಳೆ ಪ್ರಸಾದ್‌ ಮಾತನಾಡಿ, ನನ್ನ ರಾಜಕೀಯ ಜೀವನದ ಎಲ್ಲ ಏಳು ಬೀಳುಗಳನ್ನು ಪುಸ್ತಕದಲ್ಲಿ ದಾಖಲಿಸಿದ್ದೇನೆ. ನಾನು ಆತ್ಮ ತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಘೋಷಿಸಿದರು.
ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ, ರಾಜಕೀಯ ಬೆಳವಣಿಗೆಗಳಿಂದಾಗಿ ಕಾರಣದಿಂದಾಗಿ ಮತ್ತೇ ಸ್ಪರ್ಧೆ ಮಾಡಿದ್ದೆ. ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದು ಇಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು