ಮೈಸೂರು:ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು ಇಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ 35 ದಿನಗಳು ಬಾಕಿ ಇರುವ ವೇಳೆಯೇ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯನ್ನು ಈ ವವರ್ಗಾವಣೆ ಮಾಡಿರುವುದು ಕುತೂಹಲಕ್ಕೆ ಎಡೆಮಾಡಿದೆ. ನೂತನ ಜಿಲ್ಲಾಧಿಕಾರಿಯನ್ನಾಗಿ ನಿತೇಶ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.