ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ವನ್ನು ಬಹಳ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ನಡೆಸಲು ರಾಜ್ಯ ಸರ್ಕಾರ ದಸರಾ ಪ್ರಾಧಿಕಾರ ವನ್ನು ಕೂಡಲೇ ರಚಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಒತ್ತಾಯಿಸಿದರು.
ಗುರುವಾರ ಚಾಮುಂಡಿ ಬೆಟ್ಟದಲ್ಲಿ ನಡೆದ ನಾಡ ಹಬ್ಬ ಮೈಸೂರು ದಸರಾ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಹಿಂದುಳಿದಿದೆ ಎಂದು ಅಲ್ಲಿನ ಅಭಿವೃದ್ಧಿ ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಆದರೆ ಮೈಸೂರನ್ನು ಕಡೆಗಣಿಸಬಾರದು. ಇದರ ಅಭಿವೃದ್ಧಿ ಗೂ ಹೆಚ್ಚಿನ ಆದ್ಯತೆ ನೀಡಬೇಕು. ಕಳೆದ ಎರಡು ವರ್ಷದಿಂದ ಯಾವುದೇ ಅನುದಾನ ನೀಡಿಲ್ಲ. ಕಾವೇರಿ ವರುಣಾ ನಾಲೆಯ ಅಭಿವೃದ್ಧಿ ಆಗಿಲ್ಲ. ಹಾಗಾಗಿ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.